ಶಿರೂರು: ರಾಷ್ಟ್ರಭಕ್ತ ಸ್ವಾಮಿ ವಿವೇಕಾನಂದರ ಜನ್ಮ ಜಯಂತಿ ಹಾಗೂ ರಾಷ್ಟ್ರೀಯ ಯುವ ದಿನದ ಅಂಗವಾಗಿ ಸರಕಾರಿ ಪದವಿ ಪೂರ್ವ ಕಾಲೇಜು ಶಿರೂರಿನಲ್ಲಿ  ಸ್ವಾಮಿ ವಿವೇಕಾನಂದರ ಜನ್ಮ ಜಯಂತಿ ಆಚರಣೆ ಹಾಗೂ ಸ್ವಚ್ಚತಾ ಕಾರ್ಯಕ್ರಮ ನಡೆಯಿತು.ಬೈಂದೂರು ಶಿಕ್ಷಣ ಇಲಾಖೆಯ ಸಿ.ಆರ್.ಪಿ ವಿಶ್ವನಾಥ ಮೇಸ್ತ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ಪ್ರಸ್ತುತ ಕಾಲ ಘಟ್ಟದಲ್ಲಿ ಸ್ವಚ್ಛತೆಯ ಮಹತ್ವ ಮತ್ತು ಅದರ ವಿವಿಧ ಆಯಾಮಗಳ ಬಗ್ಗೆ ಸಾರ್ವತ್ರಿಕ ಅರಿವು ಮೂಡಿಸುವುದು ಅತ್ಯಂತ ಅವಶ್ಯಕವಾಗಿದೆ.ಸ್ವಚ್ಛತೆ ಒಂದು ಸಾಮಾಜಿಕ ಹೊಣೆಗಾರಿಕೆಯಾಗಿದ್ದು ಈ ನಿಟ್ಟಿನಲ್ಲಿ ಎಲ್ಲರೂ ಕೈಜೋಡಿಸಬೇಕಾಗಿದೆ.ಸ್ವಚ್ಛ ಮನಸ್ಸುಗಳಿಂದ ಸ್ವಚ್ಛ ಪರಿಸರವಾದರೆ ಸಮಾಜದ ನಿರ್ವಹಣೆಯಾಗುತ್ತದೆ.ನಮ್ಮ ಸುತ್ತಲಿನ ಪರಿಸರವನ್ನು ಸ್ವಚ್ಚವಾಗಿ ಇಡುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲೆ ಸುಜಾತ ಅವಭೃತ,ಉಪಪ್ರಾಂಶುಪಾಲ ಬೊಮ್ಮಯ್ಯ ಬಿ.ಗಾಂವ್ಕರ್,ಫ್ರೌಢಶಾಲಾ ವಿಭಾಗದ ಕಾರ್ಯಾಧ್ಯಕ್ಷ ತುಳಸಿದಾಸ್ ಮೊಗೇರ್,ದೈಹಿಕ ಶಿಕ್ಷಕ ವಿಜಯ ಕುಮಾರ್ ಶೆಟ್ಟಿ,ಉಪನ್ಯಾಸಕರಾದ ವೆಂಕಟರಮಣ,ಮಹೇಶ್ ಉಡುಪ,ನಾಗವೇಣಿ,ಸಂತೋಷ ಹಾಗೂ ಶಿಕ್ಷಕ ವೃಂದದವರು ಹಾಜರಿದ್ದರು.

ಉಪನ್ಯಾಸಕಿ ಶ್ರೀದೇವಿ ಕಾರ್ಯಕ್ರಮ ನಿರ್ವಹಿಸಿದರು.ಈ ಸಂದರ್ಭದಲ್ಲಿ ಶಿರೂರಿನ ವಿವಿಧ ಕಡೆಗಳಲ್ಲಿ ಸ್ವಚ್ಚತೆ ನಡೆಸಲಾಯಿತು.

 

Leave a Reply

Your email address will not be published.

ten + five =