ಶಿರೂರು: ಯುವಶಕ್ತಿ ಗಣೆಶೋತ್ಸವ ಸಮಿತಿ (ರಿ.) ಕರಾವಳಿ ಶಿರೂರು ಇದರ ಮಾಜಿ ಅಧ್ಯಕ್ಷ ಹಾಗೂ ಶಿರೂರು ಗ್ರಾಮ ಪಂಚಾಯತ್ ಮಾಜಿ ಸದಸ್ಯ ಮಂಗಳು ಬಿಲ್ಲವ (52) ಕರಾವಳಿ ಇವರು ಗುರುವಾರ ಅಲ್ಪಕಾಲದ ಅಸೌಖ್ಯದಿಂದ ಮಣಿಪಾಲ ಆಸ್ಪತ್ರೆಯಲ್ಲಿ ನಿಧನರಾದರು.ಇವರು ಯುವಶಕ್ತಿ ಕರಾವಳಿ ಸಂಸ್ಥೆಯ ಸಮಿತಿಯ ಸದಸ್ಯರಾಗಿ ವಿವಿಧ ಹುದ್ದೆಗಳನ್ನು ಅಲಂಕರಿಸಿ ಶಿರೂರು ಗ್ರಾಮ ಪಂಚಾಯತ್ ಸದಸ್ಯರಾಗಿದ್ದು ಜೊತೆಗೆ ಊರಿನ ಸಮಾಜ ಸೇವಕರಾಗಿದ್ದರು. ಮೃತರು ಪತ್ನಿ, ಒಂದು ಗಂಡು,ಒಂದು ಹೆಣ್ಣು ಹಾಗೂ ಅನೇಕ ಅಭಿಮಾನಿಗಳನ್ನು ಅಗಲಿದ್ದಾರೆ.
ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ,ಬೈಂದೂರು ತಾಲೂಕು ರೈತ ಸಂಘದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ,ಜಿ.ಪಂ ಮಾಜಿ ಸದಸ್ಯ ಸುರೇಶ ಬಟ್ವಾಡಿ,ತಾ.ಪಂ ಮಾಜಿ ಸದಸ್ಯ ಪುಷ್ಪರಾಜ್ ಶೆಟ್ಟಿ,ಶಿರೂರು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಚಿಕ್ಕು ಪೂಜಾರಿ ಮೊದಲಾದವರು ಅಂತಿಮ ನಮನ ಸಲ್ಲಿಸಿದರು.

Leave a Reply

Your email address will not be published. Required fields are marked *

nine + 7 =