ಬೈಂದೂರು,: ಬ್ಲಾಕ್ ಕಾಂಗ್ರೆಸ್ ಬೈಂದೂರು ಇದರ ವತಿಯಿಂದ ಸ್ವಾತಂತ್ರೋತ್ಸವದ ಸುವರ್ಣ ಮಹೋತ್ಸವದ ಅಂಗವಾಗಿ ಕಾಲ್ನಡಿಗೆ ಜಾಥಾ ಕಾರ್ಯಕ್ರಮ ಖಂಬದಕೋಣೆಯಲ್ಲಿ ಚಾಲನೆ ನೀಡಲಾಯಿತು.ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಕಾಲ್ನಡಿಗೆ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ರಾಜ್ಯ ಮತ್ತು ರಾಷ್ಟ್ರದಲ್ಲಿ ಬಿಜೆಪಿ ಸರಕಾರ ಅಧಿಕಾರದಲ್ಲಿದೆ ಅಭಿವೃದ್ದಿ ಹೆಸರಲ್ಲಿ ಜನರನ್ನು ಮರಳು ಮಾಡಿದ್ದು ಬಿಟ್ಟರೆ ಯಾವ ಭಾಗದಲ್ಲೂ ಪ್ರಗತಿ ಕಂಡಿಲ್ಲ ಕಾಂಗ್ರೆಸ್ ಅವಧಿಯಲ್ಲಿ ಜಾರಿಗೆ ಬಂದ ಯೋಜನೆಗಳನ್ನು ಬಿಜೆಪಿ ತನ್ನ ಯೋಜನೆ ಎಂದು ಬಿಂಬಿಸುತ್ತಿದೆ.ಗ್ರಾಮೀಣ ಭಾಗದ ಜನರ ಸಂಕಷ್ಟ,ಮೀನುಗಾರರ ಸಮಸ್ಯೆಗಳಿಗೆ ಗಮನ ಕೊಟ್ಟಿಲ್ಲ.ರಾಜ್ಯದ ಖಜಾನೆ ಕೊಳ್ಳೆ ಹೊಡೆದಿದ್ದು ಬಿಟ್ಟರೆ ಅಭಿವೃದ್ದಿ ಶೂನ್ಯ ಎಂದರು.
ಈ ಸಂದರ್ಭದಲ್ಲಿ ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆ,ಅಭಯಚಂದ್ರ ಜೈನ್,ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎ ಗಫೂರ್,ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ ಕುಮಾರ್ ಕೊಡವೂರು,ಜಿಲ್ಲಾ ಉಪಾಧ್ಯಕ್ಷ ಎಸ್.ರಾಜು ಪೂಜಾರಿ,ಕಾಂಗ್ರೆಸ್ ಮುಖಂಡರಾದ ರಘುರಾಮ ಶೆಟ್ಟಿ,ಪ್ರಕಾಶ್ಚಂದ್ರ ಶೆಟ್ಟಿ,ವಾಸುದೇವ ಯಡಿಯಾಳ, ಮದನ್ ಕುಮಾರ್ ಉಪ್ಪುಂದ, ನಾಗರಾಜ ಗಾಣಿಗ,ನಾಗರಾಜ ಶೆಟ್ಟಿ,ರಮೇಶ್ ಗಾಣಿಗ, ಎನ್.ಎಸ್.ಯು.ಐ ಜಿಲ್ಲಾಧ್ಯಕ್ಷ ಸೌರಭ್ ಬಲ್ಲಾಳ,ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ದೀಪಕ್ ಕೋಟ್ಯಾನ್, ,ಯುವ ಕಾಂಗ್ರೆಸ್ ಅಧ್ಯಕ್ಷ ಶೇಖರ ಪೂಜಾರಿ,ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೌರಿ ದೇವಾಡಿಗ,ತಾ.ಪಂ ಮಾಜಿ ಸದಸ್ಯ ಜಗದೀಶ ದೇವಾಡಿಗ,ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ತಬ್ರೇಜ್ ನಾಗೂರು,ಮಣಿಕಂಠ ದೇವಾಡಿಗ ವಿವಿಧ ಘಟಕಗಳ ಅಧ್ಯಕ್ಷರು ಹಾಜರಿದ್ದರು.ಕಾಲ್ನಡಿಗೆ ಜಾಥಾ ಖಂಬದಕೋಣೆಯಿಂದ ಚಾಲನೆಗೊಂಡು ಬಳಿಕ ಬೈಂದೂರು ಅಂಬೇಡ್ಕರ್ ಭವನದಲ್ಲಿ ಸಮಾರೋಪಗೊಂಡಿತು.
News/Giri shiruru