ಬೈಂದೂರು: ನವಭಾರತ ಮತ್ತು ನವ ಕರ್ನಾಟಕ ಕಲ್ಪನೆಯಡಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಅಭಿವೃದ್ದಿ ಯೋಜನೆಗಳನ್ನು ಪ್ರತಿ ಮನೆ ಮನೆಗೆ ತಲುಪಿಸುವ ಉದ್ದೇಶ ಹಾಗೂ ಬಾರತೀಯ ಜನತಾ ಪಕ್ಷದ ಸಾಧನೆಗಳನ್ನು ಮತದಾರರ ಮನೆ ಮನೆಗೆ ತಲುಪಿಸುವ ವಿಜಯ ಸಂಕಲ್ಪ ಅಭಿಯಾನ ಜನವರಿ 21 ರಿಂದ 29 ರ ವರೆಗೆ ನಡೆಯಲಿದೆ ಎಂದು ಬೈಂದೂರು ಬಿಜೆಪಿ ಮಂಡಲದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಹೇಳಿದರು ಅವರು ಭಾರತೀಯ ಜನತಾ ಪಕ್ಷದ ಬೈಂದೂರು ಬಿಜೆಪಿ ಕಛೇರಿಯಲ್ಲಿ ಪತ್ರಿಕಾಗೋಷ್ಟಿಯನ್ನುದ್ದೇಶಿಸಿ ಮಾತನಾಡಿ ಶಿಕ್ಷಣ,ಗ್ರಾಮೀಣಾಭಿವೃದ್ದಿ ಹಾಗೂ ರಾಜ್ಯ ಮತ್ತು ರಾಷ್ಟ್ರಮಟ್ಟದ ನಾಯಕರ ಉಪಸ್ಥಿತಿಯಲ್ಲಿ ಸಮಾರೋಪ ಸಮಾರಂಭ ಕಾರ್ಯಕ್ರಮ ನಡೆಯಲಿದೆ ಎಂದರು.

ಬಿಜೆಪಿ ಪಕ್ಷ ಯಾರನ್ನು ಸೂಚಿಸಿಲ್ಲ; ಈಗಾಗಲೇ ಬೈಂದೂರು ಕ್ಷೇತ್ರದಲ್ಲಿ ಹಲವಾರು ಆಕಾಂಕ್ಷಿಗಳು ನಮಗೆ ಬಿಜೆಪಿಯಲ್ಲಿ ಟಿಕೇಟ್ ನೀಡುವುದಾಗಿ ಪಕ್ಷದ ಹಿರಿಯರು ಹೇಳಿದ್ದಾರೆ.ಈ ಗೊಂದಲ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು ಪಕ್ಷ ಇದುವರೆಗೆ ಯಾರ ಹೆಸರನ್ನು ಅಂತಿಮಗೊಳಿಸಿಲ್ಲ.ಅನಗತ್ಯ ಗೊಂದಲಗಳು ಬೇಡ.ಪಕ್ಷದ ಹಿರಿಯರು ಸೂಚಿಸಿದ ವ್ಯಕ್ತಿ ಈ ಕ್ಷೇತ್ರದ ಅಭ್ಯರ್ಥಿಯಾಗಲಿದ್ದಾರೆ.ಭಾರತೀಯ ಜನತಾ ಪಕ್ಷದಲ್ಲಿ ಯಾವುದೇ ಗೊಂದಲಗಳಿಲ್ಲ ಎಂದರು.

ಪತ್ರಿಕಾಗೋಷ್ಠಿಯಲ್ಲಿ ವಿಜಯ ಸಂಕಲ್ಪ ಅಭಿಯಾನದ ಸಂಚಾಲಕ ಸದಾನಂದ ಉಪ್ಪಿನಕುದ್ರು,ಸಹ ಸಂಚಾಲಕ ಶರತ್ ಕುಮಾರ್ ಶೆಟ್ಟಿ ಉಪ್ಪುಂದ,ಮಂಡಲದ ಸಂಚಾಲಕ ಪ್ರಕಾಶ ಜಡ್ಡು,ಸದಾಶಿವ ಕಂಚುಗೋಡು ಹಾಜರಿದ್ದರು.

ಬಿಜೆಪಿ ಮಂಡಲದ ಪ್ರಧಾನ ಕಾರ್ಯದರ್ಶಿ ಪ್ರಿಯದರ್ಶಿನಿ ದೇವಾಡಿಗ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು.ರವಿ ಶೆಟ್ಟಿಗಾರ್ ವಂದಿಸಿದರು.

News/pic: Giri shiruru

 

Leave a Reply

Your email address will not be published.

17 + 2 =