ಶಿರೂರು: ಕಣ್ಣಿನ ಜಾಗೃತೆ ಅತ್ಯಗತ್ಯವಾಗಿದೆ.ಅನೇಕ ಬಾರಿ ನಮಗರಿವಿಲ್ಲದಂತೆ ಆರೋಗ್ಯದ ಸಮಸ್ಯೆ ನಮ್ಮೊಳಗೆ ಕೂಡಿಕೊಂಡಿರುತ್ತದೆ.ಹಾಗಾಗಿ ಸಮಯಕ್ಕೆ ಸರಿಯಾಗಿ ತಪಾಸಣೆಗಳು ಅತ್ಯಗತ್ಯವಾಗಿದೆ.ಮುದ್ದುಮನೆ ಟ್ರಸ್ಟ್ ಕಳೆದ ಹಲವು ವರ್ಷಗಳಿಂದ ಗ್ರಾಮೀಣ ಭಾಗದಲ್ಲಿ ಇಂತಹ ಶಿಬಿರಗಳನ್ನು ಆಯೋಜಿಸುತ್ತಿದೆ ಎಂದು ಪಾರ್ವತಿ ಮಹಾಬಲ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಶಿರೂರು ಮುದ್ದುಮನೆ ಅಧ್ಯಕ್ಷ ರವಿರಾಜ್ ಹೆಗ್ಡೆ ಚೇರ್ಕಾಡಿ ಹೇಳಿದರು ಅವರು ಯುವಶಕ್ತಿ ಸಭಾ ವೇದಿಕೆ ಕರಾವಳಿಯಲ್ಲಿ ನಡೆದ ದೃಷ್ಟಿ ಪ್ರಧಾನ ಯೋಜನೆ 2022-23,ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,ಪ್ರಾಥಮಿಕ ಆರೋಗ್ಯ ಕೇಂದ್ರ ಶಿರೂರು,ಪಾರ್ವತಿ ಮಹಾಬಲ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಶಿರೂರು ಮುದ್ದುಮನೆ,ಲಯನ್ಸ್ ಕ್ಲಬ್ ಬೈಂದೂರು – ಉಪ್ಪುಂದ ಇದರ ಸಂಯುಕ್ತ ಆಶ್ರಯದಲ್ಲಿ ಉಚಿತ ನೇತ್ರ ತಪಾಸಣೆ ಹಾಗೂ ಶಸ್ತ್ರ ಚಿಕಿತ್ಸಾ ಶಿಬಿರ ಉದ್ಘಾಟಿಸಿ ಈ ಮಾತುಗಳನ್ನಾಡಿದರು.
ಮುಖ್ಯ ಅತಿಥಿಗಳಾಗಿ ದಿನೇಶ್ ಪೂಜಾರಿ,ನಾರಾಯಣ ಶೆಟ್ಟಿ ಎಲ್ಲೂರು,ಡಾ.ವೆಂಕಟೇಶ ಯು,ಕಾರ್ಯದರ್ಶಿ ಶಂಕರ ಶೆಟ್ಟಿ,ಶಿರೂರು ಗ್ರಾ.ಪಂ ಉಪಾಧ್ಯಕ್ಷ ರವೀಂದ್ರ ಶೆಟ್ಟಿ ಪಟೇಲ್,ಯುವಶಕ್ತಿ ಗಣೇಶೋತ್ಸವ ಸಮಿತಿ ಅಧ್ಯಕ್ಷ ವಿಠ್ಠಲ ಬಿಲ್ಲವ,ಗ್ರಾ.ಪಂ ಸದಸ್ಯ ಪ್ರಸನ್ನ ಶೆಟ್ಟಿ ಕರಾವಳಿ, ಪತ್ರಕರ್ತ ಅರುಣ್ ಕುಮಾರ್ ಶಿರೂರು,ಶಿರೂರು ಮುದ್ದುಮನೆ ಕಣ್ಣಿನ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಮನೋಜ್ ಭಟ್,ಯುವಶಕ್ತಿ ಉತ್ಸವ ಸಮಿತಿ ಅಧ್ಯಕ್ಷ ಚಂದ್ರ ಮೊಗೇರ್ ಉಪಸ್ಥಿತರಿದ್ದರು.
ಸಿ.ಎಚ್.ಓ ಅಶ್ವಿನಿ ಸ್ವಾಗತಿಸಿದರು.ಶಿರೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬಂದಿ ನಾಗರಾಜ್ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು.
News/Giri shiruru