ಶಿರೂರು: ಮಕ್ಕಳ ಕಲಿಕೆಯನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಕಲಿಕಾ ಹಬ್ಬ ಆಯೋಜಿಸಲಾಗುತ್ತಿದ್ದು ಇದು ಮಕ್ಕಳ ಕಲಿಕಾ ಉತ್ಸಾಹವನ್ನು ಹೆಚ್ಚಿಸುತ್ತದೆ.ಕಲಿಕೆಯತ್ತ ಮಕ್ಕಳ ಮನಸ್ಸನ್ನು ಸೆಳೆಯುವ ವಿಭಿನ್ನ ಪ್ರಯತ್ನ ಇದಾಗಿದ್ದು ಮಕ್ಕಳು ಖುಷಿಯಿಂದ ಕಲಿಕೆಯಲ್ಲಿ ತೊಡಗಿಕೊಳ್ಳಬೇಕು.ಸರ್ಕಾರದ ಆಶಯದಂತೆ ಕಲಿಕಾ ಹಬ್ಬವನ್ನು ತಾಲೂಕಿನ ಎಲ್ಲೆಡೆ ಆಚರಿಸಲಾಗುತ್ತಿದೆ.ಕಲಿಕಾ ಹಬ್ಬ ಮಕ್ಕಳ ಮನಸ್ಸನ್ನು ಅರಳಿಸುತ್ತದೆ.ವಿದ್ಯಾರ್ಥಿಗಳು ಆಟ ಆಡುವ ಮೂಲಕ ಪಾಠ ಕಲಿಯುತ್ತಿದ್ದಾರೆ ಎಂದು ತಾ.ಪಂ ಮಾಜಿ ಸದಸ್ಯ ಪುಷ್ಪರಾಜ್ ಶೆಟ್ಟಿ ಹೇಳಿದರು ಅವರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೈಂದೂರು ಹಾಗೂ ಸಮೂಹ ಸಂಪನ್ಮೂಲ ಕೇಂದ್ರ ಶಿರೂರು ಇದರ ವತಿಯಿಂದ ನಡೆದ ಮಕ್ಕಳ ಕಲಿಕಾ ಹಬ್ಬ ಉದ್ಘಾಟಿಸಿ ಈ ಮಾತುಗಳನ್ನಾಡಿದರು.
ಶಿರೂರು ಗ್ರಾ.ಪಂ ಉಪಾಧ್ಯಕ್ಷ ರವೀಂದ್ರ ಶೆಟ್ಟಿ ಪಟೇಲ್,ಬಿ.ಆರ್.ಪಿ ಮಂಜುನಾಥ, ಬಿ.ಐ.ಆರ್.ಟಿ ನಾಗರತ್ನ,ಪೇಟೆ ಶಾಲೆಯ ಮುಖ್ಯ ಶಿಕ್ಷಕಿ ಸರಸ್ವತಿ,ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷೆ ಜ್ಯೋತಿ ಶೆಟ್ಟಿ ಉಪಸ್ಥಿತರಿದ್ದರು.
ಸಿ.ಆರ್.ಪಿ ವಿಶ್ವನಾಥ ಮೇಸ್ತ ಪ್ರಾಸ್ತಾವಿಕ ಮಾತುಗಳನ್ನಾಡಿದರು.ಹೇನ್‌ಬೇರು ಶಾಲಾ ಶಿಕ್ಷಕ ಶ್ರೀಕಾಂತ ಕಾಮತ್ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು.ಶಿಕ್ಷಕಿ ಯಶೋಧ ವಂದಿಸಿದರು.