ಬೈಂದೂರು: ಹಿಂದೂ ಜಾಗರಣ ವೇದಿಕೆ ಬೈಂದೂರು ತಾಲೂಕು ಜನಜಾಗೃತಿಗಾಗಿ ಅಖಂಡ ಭಾರತ ಸಂಕಲ್ಪ ದಿನ ಹಾಗೂ ಪಂಜಿನ ಮೆರವಣಿಗೆ ಆ.12 ರಂದು ಸಂಜೆ 6 ಗಂಟೆಗೆ ನಡೆಯಲಿದೆ.ಬೈಂದೂರು ಸೇನೇಶ್ವರ ದೇವಸ್ಥಾನದಿಂದ ಹೊರಟು ನಾಕಟ್ಟೆ ಮಾರ್ಗವಾಗಿ ಆಂಜನೇಯ ದೇವಸ್ಥಾನದವರೆಗೆ ನಡೆಯಲಿದೆ.ಬಳಿಕ ಸಭಾ ಕಾರ್ಯಕ್ರಮ ನಡೆಯಲಿದೆ ಎಂದು ಬೈಂದೂರು ಹಿಂದೂ ಜಾಗರಣ ವೇದಿಕೆ ಪ್ರಕಟನೆಯಲ್ಲಿ ತಿಳಿಸಲಾಗಿದೆ.
