ಬೈಂದೂರು: ಶ್ರೀರಾಮ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ನಿ.ಬೈಂದೂರು ಕಳೆದ ಸಾಲಿನಲ್ಲಿ ಸುಮಾರು 300 ಕೋಟಿ ರೂಪಾಯಿಗೂ ಅಧಿಕ ವ್ಯವಹಾರ ನಡೆಸಿ, 80,47,094.07 ರೂ. ನಿವ್ವಳ ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷ ಎಸ್. ರಾಜು ಪೂಜಾರಿ ಹೇಳಿದರು ಅವರು ರವಿವಾರ ಸಂಘದ ಪ್ರಧಾನ ಕಚೇರಿ ಆವರಣದಲ್ಲಿ ನಡೆದ 2025-26ನೇ ಸಾಲಿನ ಸಂಘದ ವಾರ್ಷಿಕ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ ಸಮಾನ ಮನಸ್ಕರು ಸೇರಿ ಸ್ಥಾಪಿಸಿದ ಈ ಸಂಸ್ಥೆ ಜಿಲ್ಲೆಯಲ್ಲಿ ಜನಸಾಮಾನ್ಯರ ಸಂಸ್ಥೆಯಾಗಿ ಹೆಸರುಗಳಿಸಿದೆ.ಸಮಾಜದ ಆರ್ಥಿಕ,ಸಾಮಾಜಿಕ,ಶೈಕ್ಷಣಿಕ ಅಭಿವೃದ್ದಿ ,ಮಹಿಳಾ ಸಬಲೀಕರಣಕ್ಕೆ ಸಹಕಾರಿಯಾಗಿದೆ.ಬೈಂದೂರಿನಲ್ಲಿರುವ ಕಳೆದ 17 ವರ್ಷದ ಹಿಂದೆ ಹುಟ್ಟಿಕೊಂಡ ನಮ್ಮ ಸಂಘವು ಬೈಂದೂರಿನ ಕೇಂದ್ರ ಸ್ಥಾನದಲ್ಲಿ ಪ್ರಧಾನ ಕಚೇರಿಯನ್ನು ಹೊಂದಿದ್ದು,ನಾಗೂರು, ಗೋಳಿಹೊಳೆ, ನಾವುಂದ, ಕಂಬದಕೋಣೆ,ಉಪ್ಪುಂದ ಹಾಗೂ ಮರವಂತೆಯಲ್ಲಿ ಶಾಖೆಯನ್ನು ತೆರೆಯಲಾಗಿದೆ. ಒಟ್ಟು 300 ಕೋಟಿಗೂ ಅಧಿಕ ವಾರ್ಷಿಕ ವ್ಯವಹಾರ ಹೊಂದಿದ್ದು ಸಂಘದ ಸದಸ್ಯರಿಗೆ ಶೇ.13% ಡಿವಿಡೆಂಡ್ ಘೋಷಿಸಲಾಗಿದೆ ಎಂದರು.

ಈ ಸಂದರ್ಭದಲ್ಲಿ ಉಪಾಧ್ಯಕ್ಷ ಎಮ್.ವಿನಾಯಕ ರಾವ್,ನಿರ್ದೇಶಕರಾದ ಸೀತಾರಾಮ ಮಡಿವಾಳ, ಅಣ್ಣಪ್ಪ ಪೂಜಾರಿ,ರಾಮಕೃಷ್ಣ ಖಾರ್ವಿ, ಮಂಜು ಪೂಜಾರಿ, ಮಂಜುನಾಥ ಪೂಜಾರಿ,ಪ್ರಶಾಂತ ಪೂಜಾರಿ, ಪುಟ್ಟ ಎಮ್.ಬಿಲ್ಲವ,ನಾಗರತ್ನ ,ಬೇಬಿ,ಧ.ಮ.ಆರ್ಯುವೇದ ಕಾಲೇಜಿನ ಉಪಪ್ರಾಂಶುಪಾಲ ಡಾ. ನಾಗರಾಜ ಪೂಜಾರಿ ಉಪಸ್ಥಿತರಿದ್ದರು.

ಶಾಖಾಧಿಕಾರಿ ಸಂತೋಷ ಸ್ವಾಗತಿಸಿದರು.ಸಂಘದ ಪ್ರಭಾರ ಮುಖ್ಯಕಾರ್ಯನಿರ್ವಹಣಾಧಿಕಾರಿ ಕಿಟ್ಟಣ್ಣ ರೈ ವಾರ್ಷಿಕ ವರದಿ ಮಂಡಿಸಿದರು.ಸುಬ್ರಹ್ಮಣ್ಯ ಪಡುಕೋಣಿ ಕಾರ್ಯಕ್ರಮ ನಿರೂಪಿಸಿದರು.ಖಂಬದಕೋಣೆ ಶಾಖಾಧಿಕಾರಿ ರಾಜೇಂದ್ರ ವಂದಿಸಿದರು.ಗೋಳಿಹೊಳೆ ಶಾಖಾಧಿಕಾರಿ ರಾಘವೇಂದ್ರ ಪೂಜಾರಿ ಅತಿಥಿಗಳನ್ನು ವೇದಿಕೆಗೆ ಆಹ್ವಾನಿಸಿದರು.ಶಾಖಾಧಿಕಾರಿ ರತಿ ಆರ್.ಪೂಜಾರಿ,ಉಮೇಶ ಹಾಗೂ ಸಿಬ್ಬಂದಿಗಳು ಸಹಕರಿಸಿದರು.

Leave a Reply

Your email address will not be published. Required fields are marked *

four + 7 =