ಶಿರೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮೇಲ್ಪಂಕ್ತಿ (ಪೇಟೆ) ಇದರ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಅನುದಾನದಲ್ಲಿ ನಿರ್ಮಾಣಗೊಂಡ ಶಾಲೆಯ ಮೇಲ್ಚಾವಣಿ ಹಾಗೂ ಇಂಟರ್ ಲಾಕ್ ನ್ನು ಜಿ.ಪಂ ಮಾಜಿ ಸದಸ್ಯ ಸುರೇಶ್ ಬಟ್ವಾಡಿ ಉದ್ಘಾಟಿಸಿದರು ಈ ಸಂದರ್ಭದಲ್ಲಿ ಮಾತನಾಡಿದ ಅವರು ಕನ್ನಡ ಶಾಲೆಯ ಅಭಿವೃದ್ದಿಗೆ ಸರಕಾರ ವಿಶೇಷ ಮುತುವರ್ಜಿ ವಹಿಸುವುದರ ಮೂಲಕ ಶಾಲೆಗಳ ಅಭಿವೃದ್ದಿಗೆ ಪ್ರಯತ್ನಿಸುತ್ತಿದೆ.ಶಿಕ್ಷಕರ ಬದ್ದತೆ ಹಾಗೂ ಪಾಲಕರ ಆಸಕ್ತಿಯಿಂದ ಸ್ಥಳೀಯರ ಸಹಕಾರ ದೊರೆತಾಗ ಕನ್ನಡ ಶಾಲೆಗಳನ್ನು ಉತ್ತಮವಾಗಿ ರೂಪಿಸಬಹುವುದಾಗಿದೆ ಎಂದರು.
ತಾ.ಪಂ ಮಾಜಿ ಸದಸ್ಯ ಪುಷ್ಪರಾಜ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಗ್ರಾ.ಪಂ ಸದಸ್ಯ ರವೀಂದ್ರ ಶೆಟ್ಟಿ ಆರ್‍ಮಕ್ಕಿ,ಶಿರೂರು ಹಿರಿಯ ನಾಗರೀಕರ ವೇದಿಕೆ ಅಧ್ಯಕ್ಷ ಚಂದ್ರಶೇಖರ ಶೆಟ್ಟಿ,ಆಕ್ರಮ -ಸಕ್ರಮ ಸಮಿತಿ ಸದಸ್ಯ ದಿನೇಶ ಕುಮಾರ್,ಸಿ.ಆರ್.ಪಿ ವಿಶ್ವನಾಥ ಮೇಸ್ತ,ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷ ಜ್ಯೋತಿ ಶೆಟ್ಟಿ,ಶಾಲಾ ಪ್ರಭಾರ ಮುಖ್ಯ ಶಿಕ್ಷಕಿ ಸರಸ್ವತಿ,ತಾಯಂದಿರ ಸಮಿತಿ ಅಧ್ಯಕ್ಷೆ ಶಮೀಮ್ ಬಾನು,ತೆಂಕಬೆಟ್ಟು ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷ ಸುಮಾ ಉಪಸ್ಥಿತರಿದ್ದರು.
ಶಿಕ್ಷಕಿ ವಿದ್ಯಾ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು.ಶಿಕ್ಷಕಿ ಯಶೋಧಾ ಶೆಟ್ಟಿ ವಂದಿಸಿದರು.
News/pic: Giri shiruru