ಬೈಂದೂರು; ಕಂದಾಯ ಇಲಾಖೆ,ಜಿಲ್ಲಾಡಳಿತ ಉಡುಪಿ ಇದರ ಬೈಂದೂರು ತಾಲೂಕು ಆಡಳಿತ ಸೌಧದ ನೂತನ ಕಟ್ಟಡ ಉದ್ಘಾಟನೆ ಸಮಾರಂಭ ಮಾ.15 ರಂದು ಪೂರ್ವಾಹ್ನ 10:30ಕ್ಕೆ ಬೈಂದೂರಿನಲ್ಲಿ ನಡೆಯಲಿದೆ.ಮೀನುಗಾರಿಕೆ,ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ನೂತನ ಕಟ್ಟಡವನ್ನು ಉದ್ಘಾಟಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜಿ,ಸಮಾಜ ಕಲ್ಯಾಣ ಇಲಾಖೆಯ ಸಚಿವ ಕೋಟ ಶ್ರೀನಿವಾಸ ಪೂಜಾರಿ,ಇಂಧನ ಸಚಿವ ಸುನೀಲ್ ಕುಮಾರ್,ಕಂದಾಯ ಸಚಿವ ಆರ್.ಅಶೋಕ,ವಸತಿ ಸಚಿವ ವಿ.ಸೋಮಣ್ಣ ಹಾಗೂ ಬೈಂದೂರು ಶಾಸಕರಾದ ಬಿ.ಎಮ್.ಸುಕುಮಾರ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದು ಮುಂತಾದ ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ ಎಂದು ತಾಲೂಕು ಆಡಳಿತದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.