ಬೈಂದೂರು; ಕರ್ನಾಟಕ ನೀರಾವರಿ ನಿಗಮದ ವತಿಯಿಂದ ಸುಮಾರು ಎರಡು ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಂಡ ಬೈಂದೂರು ರಥಬೀದಿ ರಸ್ತೆಯನ್ನು ಶಿವಮೊಗ್ಗ ಲೋಕಸಭಾ ಸಂಸದ ಬಿ.ವೈ ರಾಘವೇಂದ್ರ ಲೋಕಾರ್ಪಣೆಗೊಳಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು ಬೈಂದೂರು ಕ್ಷೇತ್ರದಲ್ಲಿ ಬಹುತೇಕ ಪ್ರಮುಖ ರಸ್ತೆಗಳು ಕಾಂಕ್ರೇಟಿಕರಣಗೊಳ್ಳುವುದರ ಮೂಲಕ ಪ್ರಗತಿ ಕಂಡಿದೆ.ಬೈಂದೂರು ತಾಲೂಕು ಕೇಂದ್ರದ ಪ್ರಮುಖ ಮುಖ್ಯ ರಸ್ತೆಯಾಗಿರುವ ಬೈಂದೂರು ರಥಬೀದಿ ರಸ್ತೆ ಅಭಿವೃದ್ದಿಯಿಂದ ನಿತ್ಯ ಸಂಚಾರಕ್ಕೆ ಇನ್ನಷ್ಟು ಅನುಕೂಲವಾಗಲಿದೆ ಎಂದರು.

ಈ ಸಂದರ್ಭದಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ,ಶಾಸಕ ಬಿ.ಎಮ್.ಸುಕುಮಾರ ಶೆಟ್ಟಿ,ಯಶಪಾಲ್ ಸುವರ್ಣ,ಉದಯ ಕುಮಾರ್ ಶೆಟ್ಟಿ,ಬಿಜೆಪಿ ಜಿಲ್ಲಾಧ್ಯಕ್ಷ ಸುರೇಶ್ ನಾಯಕ್ ಕುಯಿಲಾಡಿ,ಬೈಂದೂರು ಬಿಜೆಪಿ ಮಂಡಲದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ,ಜಿ.ಪಂ ಮಾಜಿ ಸದಸ್ಯರಾದ ಕೆ.ಬಾಬು ಶೆಟ್ಟಿ,ಸುರೇಶ ಬಟ್ವಾಡಿ,ತಾ.ಪಂ ಮಾಜಿ ಸದಸ್ಯ ಪುಷ್ಪರಾಜ್ ಶೆಟ್ಟಿ ಮೊದಲಾದವರು ಹಾಜರಿದ್ದರು.

 

Leave a Reply

Your email address will not be published. Required fields are marked *

5 × 2 =