ಬೈಂದೂರು: ಭಾರತೀಯ ಜನತಾ ಪಾರ್ಟಿ ಬೈಂದೂರು ವಿಧಾನಸಭಾ ಕ್ಷೇತ್ರ ಇದರ ವಿವಿಧ ಕ್ಷೇತ್ರದ ಸಾರ್ವಜನಿಕರಿಂದ ಪ್ರಣಾಳಿಕಾ ಸಲಹಾ ಸಂಗ್ರಹ ಅಭಿಯಾನ ಕಾರ್ಯಕ್ರಮ ಶ್ರೀ ಕೃಷ್ಣ ಲಲಿತಾ ಕಲಾಮಂದಿರ ನಾಗೂರಿನಲ್ಲಿ ನಡೆಯಿತು.
ಜಿ.ಪಂ ಮಾಜಿ ಸದಸ್ಯ ಕೆ.ಬಾಬು ಶೆಟ್ಟಿ ಸಾರ್ವಜನಿಕರಿಂದಲೇ ಅಭಿಪ್ರಾಯ ಸಂಗ್ರಹಿಸಿ ಪ್ರಣಾಳಿಕೆ ಬಿಡುಗಡೆಗೊಳಿಸಿ ಮಾತನಾಡಿ ಸಮೃದ್ದ ಕರ್ನಾಟಕ ಬಿಜೆಪಿ ವಿಚಾರದಡಿ ಹಲವು ಯೋಜನೆಗಳ ಅನುಷ್ಠಾನವು ಸ್ಥಳೀಯ ಮಟ್ಟದಲ್ಲಿ ಕಾರ್ಯರೂಪಕ್ಕೆ ತರುವಂತೆ ಪಕ್ಷದ ಕಾರ್ಯಕರ್ತರು ಮತ್ತು ಸಾರ್ವಜನಿಕರು ಜೊತೆಗೂಡಿ ಕಾರ್ಯ ನಿರ್ವಹಿಸಬೇಕು ಎಂದರು.
ಬೈಂದೂರು ಬಿಜೆಪಿ ಮಂಡಲದ ಪ್ರಧಾನ ಕಾರ್ಯದರ್ಶಿ ಪ್ರಕಾಶ ಪೂಜಾರಿ ಜಡ್ಡು ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭದಲ್ಲಿ ಸಲಹಾ ಸಂಗ್ರಹ ಅಭಿಯಾನದ ಜಿಲ್ಲಾ ಸಂಯೋಜಕ ಶ್ಯಾಮಸುಂದರ್ ನಾಯರಿ,ಬೈಂದೂರು ವಿಧಾನಸಭಾ ಕ್ಷೇತ್ರದ ಸಂಯೋಜಕ ಅಶೋಕ ಶೆಟ್ಟಿ,ಸಹಸಂಯೋಜಕ ರಾಜ್‌ಗೋಪಾಲ ಹೆಗ್ಡೆ ಚಿಟ್ಟೆ,ರಾಜಶೇಖರ ದೇವಾಡಿಗ ಬೈಂದೂರು,ತಾ.ಪಂ ಮಾಜಿ ಸದಸ್ಯ ಪುಷ್ಪರಾಜ್ ಶೆಟ್ಟಿ,ಬಿಜೆಪಿ ಮಂಡಲದ ಪ್ರಧಾನ ಕಾರ್ಯದರ್ಶಿ ಪ್ರಿಯದರ್ಶಿನಿ ದೇವಾಡಿಗ,ಉಪಾಧ್ಯಕ್ಷ ಗಣೇಶ ಗಾಣಿಗ ಉಪಸ್ಥಿತರಿದ್ದರು.
ಮರವಂತೆ ಗ್ರಾ.ಪಂ ಮಾಜಿ ಅಧ್ಯಕ್ಷೆ ಆನಿತಾ ಕೆ.ಆರ್.ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು.