ಬೈಂದೂರು: ಚುನಾವಣಾ ಘೋಷಣೆ ಬೆನ್ನಲ್ಲೇ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಯಾವುದೇ ಸಭೆ ಸಮಾರಂಭಗಳು, ಧಾರ್ಮಿಕ ಕಾರ್ಯಕ್ರಮಗಳು, ರಾಜಕೀಯ  ಪ್ರಚಾರ ಸಭೆ ಇತ್ಯಾದಿ ನಡೆಸಲು ಸಾರ್ವಜನಿಕರು, ರಾಜಕೀಯ ಪಕ್ಷದವರು ಚುನಾವಣೆ ಅಧಿಕಾರಿಗಳ ಅನುಮತಿ ಪಡೆದುಕೊಳ್ಳಬೇಕು ಎಂದು ಬೈಂದೂರು ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಜಗದೀಶ್ ಗಂಗಣ್ಣನವರ್ ತಿಳಿಸಿದರು ಅವರು ಬೈಂದೂರು ಪಟ್ಟಣ ಪಂಚಾಯತ್ ಕಚೇರಿಯಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಚುನಾವಣಾ ಆಯೋಗ ಪೂರ್ವ ತಯಾರಿ ಬಗ್ಗೆ ವಿವರಿಸಿದರು.

ಉಡುಪಿ ಜಿಲ್ಲಾ 118 ಬೈಂದೂರು ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಚುನಾವಣೆಯ ದೂರುಗಳನ್ನು  ಸ್ವೀಕರಿಸಲು ಕಂಟ್ರೋಲ್ ರೂಂ ತೆರೆಯಲಾಗಿದೆ. ದೂ ಸಂ. 08254-251657 ಹಾಗೂ 9380753009  ಸಂಪರ್ಕಿಸಬಹುದು. ಅಲ್ಲದೇ ಉಡುಪಿ ಜಿಲ್ಲಾ 118  ಬೈಂದೂರು ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತ ಚುನಾವಣೆಯ ದೂರುಗಳನ್ನು ಸ್ವೀಕರಿಸಲು ಕಂಟ್ರೋಲ್ ರೂಮ್ ತೆರೆಯಲಾಗಿದ್ದು ಇದರ ದೂರವಾಣಿ ನಂಬ್ರ:08254-251657 , ಹಾಗೂ 9380753009 ಈ ಕಂಟ್ರೋಲ್ ರೂಮ್ ಗೆ ದಿನದ 24 ಗಂಟೆಗಳು ಕಾರ್ಯಚರಣೆ ನಡೆಸುತ್ತಿದ್ದು ಚುನಾವಣೆಗೆ ಸಂಬಂದಿಸಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾದ ಪ್ರಕರಣಗಳು ಕಂಡು ಬಂದಲ್ಲಿ ಈ ಕಂಟ್ರೋಲ್ ರೂಮ್ ಗೆ ದೂರು ನೀಡಬಹುದು ಹಾಗೂ ಚುನಾವಣೆಗೆ ಸಂಬಂಧಿಸಿದ ಅಗತ್ಯ ಮಾಹಿತಿಗಳನ್ನು ಪಡೆಯಬಹುದು.ಈ ಬಾರಿ ಸಾರ್ವಜನಿಕರು ಚುನಾವಣಾ ಸಂಬಂಧಿತ ನೀತಿ ಸಂಹಿತೆ ಉಲ್ಲಂಘನೆಯ ಪ್ರಕರಣಕ್ಕೆ ಸಂಬಂಧಿಸಿದ ದೂರುಗಳನ್ನು ಸಲ್ಲಿಸಲು ಚುನಾವಣಾ ಆಯೋಗವು C-VIGILMOBILE APPನ್ನು ಅಭಿವೃದ್ಧಿಪಡಿಸಲಾಗಿದೆ. ಈ App ಮೂಲಕ ಜಿಲ್ಲೆಯಲ್ಲಿ ಚುನಾವಣೆಗೆ ಸಂಬಂಧಿಸಿದ ಉಲ್ಲಂಘನೆ ಪ್ರಕಣಗಳು ಕಂಡು ಬಂದಲ್ಲಿ ಸಾರ್ವಜನಿಕರು ಫೋಟೋ ಹಾಗೂ ವಿಡಿಯೋಗಳ ಮುಖಾಂತರ ದೂರುಗಳನ್ನು ದಾಖಲಿಸಬಹುದಾಗಿದೆ.

ಈ ಬಾರಿ 80 ವರ್ಷ ಮೇಲ್ಪಟ್ಟ ಮತದಾರರಿಗೆ ಅಂಚೆ ಮತ ಪತ್ರದ ಮೂಲಕ ಮತದಾನ ಮಾಡಲು ಅವಕಾಶವನ್ನು ಕಲ್ಪಿಸಲಾಗಿರುತ್ತದೆ. ಅಗತ್ಯ ವರ್ಗಗಳಿಗೆ ಅಂಚೆ ಮತ ಪತ್ರ ಸೌಲಭ್ಯ ಒದಗಿಸುವ ಸಂಬಂಧ ನೋಡಲ್ ಅಧಿಕಾರಿಯನ್ನಾಗಿ ಅಪರ ಜಿಲ್ಲಾಧಿಕಾರಿಗಳು ಉಡುಪಿ ಇವರನ್ನು ನೇಮಕ ಮಾಡಿ ಆದೇಶಿಸಲಾಗಿದೆ.ಈ ಚುನಾವಣಾ ಪ್ರಕ್ರಿಯೆಯನ್ನು ಶಾಂತಿಯುತವಾಗಿ ಜರಗಿಸಲು ಸಾರ್ವಜನಿಕರು ಸಂಪೂರ್ಣ ಸಹಕಾರ ನೀಡುವಂತೆ ಮನವಿ ಮಾಡಿದರು.

ಬೈಂದೂರು ತಾಲೂಕು ಎ ಗ್ರೇಡ್ ತಹಶೀಲ್ದಾರ್ ಪ್ರಭುಸ್ವಾಮಿ ಎ, ಬಿ ಗ್ರೇಡ್ ತಹಶೀಲ್ದಾರ್ ಶ್ರೀಕಾಂತ್ ಹೆಗ್ಡೆ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

 

 

Leave a Reply

Your email address will not be published.

14 − 14 =