ಬೈಂದೂರು: ತಾಲೂಕು ಆಡಳಿತ ಸೌಧ ಕಛೇರಿ ಬೈಂದೂರಿನಲ್ಲಿ ವಿಶ್ವಕರ್ಮ ಜಯಂತಿಯನ್ನು ಆಚರಿಸಲಾಯಿತು.ಬೈಂದೂರು ತಹಶೀಲ್ದಾರ ರವಿರಾಜ್ ದೀಕ್ಷಿತ್ ವಿಶ್ವಕರ್ಮರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು.
ಗ್ರೇಡ್ 2 ತಹಶೀಲ್ದಾರ ರಾಮಚಂದ್ರಪ್ಪ,ಆಹಾರ ನಿರೀಕ್ಷಕ ವಿನಯ,ಬೈಂದೂರು ತಾಲೂಕು ವಿಶ್ವಕರ್ಮ ಸಂಘದ ಅಧ್ಯಕ್ಷ ನಾರಾಯಣ ಆಚಾರ್ಯ ಮಾವುಡ,ವಿಶ್ವಕರ್ಮ ಯುವಕ ಸಂಘದ ಅಧ್ಯಕ್ಷ ನಾಗರಾಜ ಆಚಾರ್ಯ ಬಂಕೇಶ್ವರ,ಮರವಂತೆ ವಿಶ್ವಕರ್ಮ ಸಮಾಜ ಸಂಘದ ಅಧ್ಯಕ್ಷ ದಿನೇಶ ಆಚಾರ್ಯ ,ನಾಗಾರಾಜ ಆಚಾರ್ಯ ಬಿಜೂರು,ಕಂದಾಯ ಇಲಾಖೆಯ ಸಿಬ್ಬಂದಿಗಳು ವಿಶ್ವಕರ್ಮ ಆಡಳಿತ ಮಂಡಳಿಯ ಸದಸ್ಯರು ಹಾಗೂ ಸಮಾಜ ಬಾಂಧವರು ಹಾಜರಿದ್ದರು.
