ಬೈಂದೂರು: ಸಂಘ ಸಂಸ್ಥೆಯನ್ನುಕಟ್ಟುವುದಕ್ಕಿಂತ ಮುನ್ನಡಸಿಕೊಂಡು ಹೋಗುವುದೇ ಬಹುಮುಖ್ಯ.ಈ ನೆಲೆಯಲ್ಲಿಎರಡು ದಶಕ ಕಂಡ ಸಾಂಸ್ಕೃತಿಕ ಸಂಘಟನೆ ಸುರಭಿ ಅದೇ ಚೈತನ್ಯದೊಂದಿಗೆ ಮುನ್ನಡೆಯುತ್ತಿರುವುದು ಶ್ಲಾಘನಾರ್ಹ ಎಂದು ಕುಂದಾಪುರ ಶ್ರೀ ರಾಮಕ್ರೆಡಿಟ್ ಕೋ -ಅಪರೇಟಿವ್ ಸೊಸೈಟಿ ಅಧ್ಯಕ್ಷ ನಾಗರಾಜ ಕಾಮಧೇನು ಹೇಳಿದರು ಅವರು ಸುರಭಿ ರಿ. ಬೈಂದೂರು ಆಶ್ರಯದಲ್ಲಿ ಆಯೋಜಿಸಲಾದ ಸುರಭಿ ಜೈಸಿರಿ ಸಾಂಸ್ಕೃತಿಕ ವರ್ಷಧಾರೆ 3 ದಿನಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಗ್ರಾಮೀಣ ಭಾಗದಲ್ಲಿ ಪ್ರತಿಭೆಗಳಿಗೆ ಕೊರತೆಯಿಲ್ಲ. ಪ್ರತಿಭಾ ಪ್ರದರ್ಶನಕ್ಕೆ ಸೂಕ್ತವಾದ ವೇದಿಕೆ ಬೇಕಿದೆ.ಇಂತಹ ಸಂಸ್ಥೆಗಳ ಆ ಕೊರತೆಯನ್ನು ನೀಗಿಸಿದೆ ಎಂದರು.
ಸುರಭಿ ಬೈಂದೂರು ಅಧ್ಯಕ್ಷ ನಾಗರಾಜ ಪಿ.ಯಡ್ತರೆ ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಬೈಂದೂರು ಸೇವಾ ಸಂಗಮ ಶಿಶು ಮಂದಿರದ ಅಧ್ಯಕ್ಷ ಮಂಜುನಾಥ ಶೆಟ್ಟಿ,ಉದ್ಯಮಿ ಯು ಪ್ರಕಾಶ್ ಭಟ್ ಉಪ್ಪುಂದ,ಎಸ್.ಸಿ.ಡಿ.ಸಿ.ಸಿ.ಬ್ಯಾಂಕ್ ಮೇಲ್ವಿಚಾರಕ ಶಿವರಾಮ ಪೂಜಾರಿ ಯಡ್ತರೆ, ಬೈಂದೂರು ಇನ್ನರ್ ವೀಲ್ ಕ್ಲಬ್‌ಅಧ್ಯಕ್ಷೆ ಭಾನುಮತಿ ಬಿ.ಕೆ, ನಿವೃತ್ತ ಮುಖ್ಯೋಪಾಧ್ಯಾಯ ಅಣ್ಣಪ್ಪ ಶೇರುಗಾರ ತೊಡವಳ್ಳಿ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಉತ್ತಮ ಕೃಷಿಕ ಪ್ರಶಸ್ತಿ ಪುರಸ್ಕೃತ ಮಂಜುನಾಥ ಡಿ.ಕೆ ಹಾಗೂ ಚದುರಂಗ ಬಾಲ ಪ್ರತಿಭೆ ರಿತೇಶ್ ಆರ್.ಕೆ ಇವರನ್ನು ಸಮ್ಮಾನಿಸಲಾಯಿತು ಹಾಗೂ ಸುರಭಿಯ ಯಕ್ಷಗುರು ಪ್ರಶಾಂತ್ ಮಯ್ಯ ದಾರಿಮಕ್ಕಿ ಅವರಿಗೆ ಗುರುವಂದನೆ ಸಲ್ಲಿಸಲಾಯಿತು.
ನಿರ್ದೇಶಕ ಗಣಪತಿ ಹೋಬಳಿದಾರ್ ಸ್ವಾಗತಿಸಿದರು.ಸುರಭಿ ಸಂಸ್ಥೆಯ ನಿರ್ದೇಶಕ ಸುಧಾಕರ ಪಿ ಬೈಂದೂರು ಪ್ರಾಸ್ತಾವಿಕ ಮಾತುಗಳನ್ನಾಡಿದರು.ಸದಸ್ಯ ರಾಮಕೃಷ್ಣ ದೇವಾಡಿಗ ಉಪ್ಪುಂದ ಕಾರ್ಯಕ್ರಮ ನಿರ್ವಹಿಸಿದರು.ಕಾರ್ಯದರ್ಶಿ ಭಾಸ್ಕರ ಬಾಡ ವಂದಿಸಿದರು.