ಬೈಂದೂರು,ಅ.1: ರೋಟರಿ ಕ್ಲಬ್ ಬೈಂದೂರು ಇದರ ವತಿಯಿಂದ ರೋಟರಿ ಕುಟುಂಬ ಸಮ್ಮಿಲನ ಕಾರ್ಯಕ್ರಮ ಬೈಂದೂರು ರೋಟರಿ ಸಮುದಾಯ ಭವನದಲ್ಲಿ ನಡೆಯಿತು.
ಬೈಂದೂರು ಸೆಂಟ್ ಥಾಮಸ್ ಶಾಲೆ ಮತ್ತು ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಫಾದರ್ ಫಿಲಿಪ್ ನೆಲ್ಲಿವಿಳ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿ ಶೈಕ್ಷಣಿಕ ಕ್ಷೇತ್ರದಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಪ್ರಾಪ್ರತಿಯೊಬ್ಬ ವ್ಯಕ್ತಿಯ ಬದುಕಿಗೆ ಶಿಕ್ಷಕರ ಮಾರ್ಗದರ್ಶನವೇ ದಾರಿದೀಪವಾಗಿದೆ. ಅತ್ಯಂತ ಶ್ರೇಷ್ಟ ವೃತ್ತಿ ಶಿಕ್ಷಕ ವೃತ್ತಿಯಾಗಿದೆ.ಕೇವಲ ಅಕ್ಷರ ಕಲಿಸುವವರಲ್ಲವಿದ್ಯಾರ್ಥಿಗಳಲ್ಲಿ ಮಾನವೀಯ ಮೌಲ್ಯಗಳನ್ನು ತುಂಬಿ ಉತ್ತಮ ನಾಗರಿಕರನ್ನಾಗಿ ರೂಪಿಸುವ ಜವಾಬ್ದಾರಿ ಶಿಕ್ಷಕರ ಮೇಲಿದೆ ಎಂದರು.

ಬೈಂದೂರು ರೋಟರಿ ಕ್ಲಬ್ ಅಧ್ಯಕ್ಷ ಅರುಣ್ ಕುಮಾರ್ ಶಿರೂರು ಅಧ್ಯಕ್ಷತೆ ವಹಿಸಿದ್ದರು.c ಈ ಸಂದರ್ಭದಲ್ಲಿ ಹಿರಿಯ ಮತ್ತು ಸಾಧಕ ಶಿಕ್ಷಕರನ್ನು ರೋಟರಿ ಸಂಸ್ಥೆಯ ವತಿಯಿಂದ ಸಮ್ಮಾನಿಸಲಾಯಿತು.
ಕೃಷ್ಣಪ್ಪ ಶೆಟ್ಟಿ ಪ್ರಾಸ್ತಾವಿಕ ಮಾತುಗಳನ್ನಾಡಿದರು.ಕಾರ್ಯದರ್ಶಿ ಎಸ್ ಮಣಿಕಂಠ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.