ಬೈಂದೂರು: ರೋಟರಿ ಕ್ಲಬ್ ಬೈಂದೂರು, ಕುಂದಾಪ್ರ ಡಾಟ್ ಕಾಂ ಸುದ್ದಿತಾಣ ಹಾಗೂ ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘ ನಿ. ಉಪ್ಪುಂದ ಇವರ ಸಹಯೋಗದಲ್ಲಿ ಶ್ರೀ ಸಿದ್ಧಿವಿನಾಯಕ ಪ್ರಸಾದಿತ ಯಕ್ಷಗಾನ ಮಂಡಳಿ ಶ್ರೀ ಕ್ಷೇತ್ರ ಹಟ್ಟಿಯಂಗಡಿ ಇವರಿಂದ ಇಂದು ಸಂಜೆ 07 ಗಂಟೆಗೆ ಬೈಂದೂರಿನ ರೋಟರಿ ಸಮುದಾಯ ಭವನದಲ್ಲಿ ಮಾಯಾ ಬಜಾರ್ ವಿಶೇಷ ಯಕ್ಷಗಾನ ಪ್ರದರ್ಶನ ಆಯೋಜಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.