ಬೈಂದೂರು: ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬೈಕ್ ವೊಂದು ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೆ ಸಾವನ್ನಪ್ಪಿದ ಘಟನೆ ಶನಿವಾರ ಮದ್ಯಾಹ್ನ ಬೈಂದೂರು ಸಮೀಪದ ವತ್ತಿನೆಣೆ ಬಳಿ ನಡೆದಿದೆ.ಮೃತ ವ್ಯಕ್ತಿಯನ್ನು ಭಟ್ಕಳ ತಾಲೂಕಿನ ಬೆಳ್ಳಿ ನಿವಾಸಿ ಉಮೇಶ ಮಂಜುನಾಥ ಮೊಗೇರ್ (43) ಎಂದು ಗುರುತಿಸಲಾಗಿದೆ.
ಆಸ್ಪತ್ರೆಯಿಂದ ಮನೆಗೆ ತೆರಳುವಾಗ ಅಪಘಾತ: ಮೃತ ವ್ಯಕ್ತಿಯ ಪತ್ನಿ ಜೊತೆಗೆ ಕುಂದಾಪುರ ಆಸ್ಪತ್ರೆಗೆ ತೆರಳಿ ಬಳಿಕ ಭಟ್ಕಳದ ಮನೆಗೆ ತೆರೆಳುತ್ತಿರುವ ವೇಳೆ ಈ ಘಟನೆ ನಡೆದಿದೆ.ಬೈಕ್ ನಲ್ಲಿದ್ದ ಪದ್ಮಾ ಮೊಗೇರ್ ರವರರಿಗೂ ಕೂಡ ಗಾಯಗಳಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಕುಂದಾಪುರ ಆಸ್ಪತ್ರೆಗೆ ಸಾಗಿಸಲಾಗಿದೆ.ಮೃತರು ಮೀನುಗಾರಿಕೆ ವೃತ್ತಿ ಮಾಡುತ್ತಿದ್ದು ರಾತ್ರಿ ವೇಳೆ ಮೀನುಗಾರಿಕೆಗೆ ತೆರಳಿ ಬೆಳಿಗ್ಗೆ ಬೈಕ್ ನಲ್ಲಿ ಕುಂದಾಪುರಕ್ಕೆ ತೆರಳಿದ್ದರು ಎನ್ನಲಾಗಿದೆ.ಈ ಬಗ್ಗೆ ಬೈಂದೂರು ಆರಕ್ಷಕ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
