ಶಿರೂರು; ಸಾರ್ವಜನಿಕ ಶ್ರೀಶಾರದೋತ್ಸವ ಸಮಿತಿ ದಾಸನಾಡಿ ಶಿರೂರು ಇದರ 38ನೇ ವರ್ಷದ ಶಾರದೋತ್ಸವ ಕಾರ್ಯಕ್ರಮ ಅ.17 ರಿಂದ 20ರ ವರೆಗೆ ದಾಸನಾಡಿ ಶ್ರೀವೆಂಕಟರಮಣ ದೇವಸ್ಥಾನದಲ್ಲಿ ನಡೆಯಲಿದೆ.
ಅ.17ರಂದು ಬೆಳಿಗ್ಗೆ ಶಾರದಾ ದೇವಿಯ ವಿಗ್ರಹದ ಪ್ರತಿಷ್ಠಾಪನೆ,ಪೂಜಾ ವಿಧಿ ವಿಧಾನಗಳು ನಡೆಯಲಿದೆ.ಸಂಜೆ 6 ಗಂಟೆಗೆ ಕ್ಕೆ ವೆಂಕಟೇಶ್ವರ ಭಜನಾ ಮಂಡಳಿ ಇವರಿಂದ ಭಜನಾ ಕಾರ್ಯಕ್ರಮ,ರಾತ್ರಿ ಪೂಜೆ,ಪ್ರಸಾದ ವಿತರಣೆ ರಾತ್ರಿ 8 ಗಂಟೆಗೆ ಸ್ಥಳೀಯ ಪ್ರತಿಭೆಗಳಿಂದ ನೃತ್ಯ ಸಿಂಚನ ಕಾರ್ಯಕ್ರಮ ನಡೆಯಲಿದೆ.
ಅ.18ರಂದು ಬೆಳಿಗ್ಗೆ ದುರ್ಗಾಹೋಮ, ಮದ್ಯಾಹ್ನ ಪೂಜೆ ,ರಾತ್ರಿ 7ಕ್ಕೆ ರಂಗಪೂಜೆ ನಡೆಯಲಿದೆ ಬಳಿಕ ಆಹ್ವಾನಿತ ಭಜನಾ ತಂಡಗಳಿಂದ ಕುಣಿತಾ ಭಜನಾ ಕಾರ್ಯಕ್ರಮ ನಡೆಯಲಿದೆ.
ಅ.19ರಂದು ಬೆಳಿಗ್ಗೆ ಚಂಡಿಕಾಹೋಮ,ಮದ್ಯಾಹ್ನ ಅನ್ನಸಂತರ್ಪಣೆ ಬಳಿಕ ಯಕ್ಷ ನಕ್ಷತ್ರ ಟ್ರಸ್ಟ್ ಕರಾಡಿ ಬಳಗದವರಿಂದ ನಂದಗೋಕುಲ ಯಕ್ಷಗಾನ ಪ್ರದರ್ಶನಗೊಳ್ಳಲಿದೆ.
ಅ.20 ರಂದು ಸಂಜೆ 4ಕ್ಕೆ ಶಾರದಾ ದೇವಿಯ ವಿಗ್ರಹ ವಿಸರ್ಜನಾ ಪೂಜೆ,ಮಹಿಳಾ ಹಾಗೂ ಪುರುಷ ತಂಡಗಳಿಂದ ಭಜನಾ ತಂಡಗಳ ಆಕರ್ಷಣ ಮೆರವಣಿಗೆ ಬಳಿಕ ದೇವಸ್ಥಾನದ ಎದುರಿನ ಕೆರೆಯಲ್ಲಿ ವಿಗ್ರಹದ ಜಲಸ್ಥಂಭನ ನಡೆಯಲಿದೆ ಎಂದು ಶಾರದೋತ್ಸವ ಸಮಿತಿ ಅಧ್ಯಕ್ಷ ಅರುಣ್ ಕುಮಾರ್ ಶೆಟ್ಟಿಪ್ರಕಟಣೆಯಲ್ಲಿ ತಿಳಿಸಿದ್ದಾರೆ.