ಬೈಂದೂರು ; ಅಮೆಚೂರ್ ಕಬ್ಬಡಿ ಫೆಡರೇಷನ್ ಆಫ್ ಇಂಡಿಯಾ ಹಾಗೂ ಕರ್ನಾಟಕ ರಾಜ್ಯ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಜಂಟಿ ಆಶ್ರಯದಲ್ಲಿ ಆಗಸ್ಟ್ 23 ರಿಂದ 26ರ ವರೆಗೆ ನಡೆದ ರಾಷ್ಟ್ರೀಯ ಕಬಡ್ಡಿ ತೀರ್ಪುಗಾರರ ಪರೀಕ್ಷೆಯಲ್ಲಿ ಬೈಂದೂರು ಕಿಶೋರ್ ಸಸಿಹಿತ್ಲು ಇವರು ತೇರ್ಗಡೆ ಹೊಂದಿರುತ್ತಾರೆ. ಇವರು ಕಳೆದ 20 ವರ್ಷಗಳಿಂದ ಕಬ್ಬಡಿ ಆಟಗಾರರಾಗಿ ಹಲವು ಬಹುಮಾನಗಳನ್ನು ಪಡೆದಿರುತ್ತಾರೆ.ಅಲ್ಲದೇ ಬೈಂದೂರು ತಾಲೂಕು ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಕಾರ್ಯದರ್ಶಿಯಾಗಿ ಪ್ರಸ್ತುತ ಸೇವೆ ಸಲ್ಲಿಸುತ್ತಿದ್ದಾರೆ ಹಾಗೂ ಅಮ್ಮಾ ವಾರಿಯರ್ಸ್ ಕಬಡ್ಡಿ ಸಂಸ್ಥೆಯ ಮಾರ್ಗದರ್ಶಕರಾಗಿ ಕಬಡ್ಡಿಗೆ ವಿಶೇಷ ಪ್ರೋತ್ಸಾಹ ನೀಡುತ್ತಿದ್ದಾರೆ.ಕಂಬಳ ,ಭಜನೆ, ಹಗ್ಗಜಗ್ಗಾಟ,ಕುಂದಾಪ್ರ ಕನ್ನಡದಂತಹ ಹಲವಾರು ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುತ್ತಾರೆ.