ಬೈಂದೂರು: ಬೈಂದೂರಿನ ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಯವರ ಶಿಫಾರಸ್ಸಿನ ಮೇರೆಗೆ ಬೈಂದೂರಿನ ಬಹುದಿನದ ಕನಸು ಈಡೇರಿದೆ.ಬೈಂದೂರು ಸಮುದಾಯ ಆರೋಗ್ಯ ಕೇಂದ್ರ ತಾಲೂಕು ಆಸ್ಪತ್ರೆಯಾಗಿ ಮೇಲ್ದರ್ಜೆಗೇರುವ ಜೊತೆಗೆ 50 ಹಾಸಿಗೆಗಳ ತಾಲೂಕು ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸಲು ಸರಕಾರ ಅನುಮೋದನೆ ನೀಡಿದೆ ಮತ್ತು 25 ಕೋಟಿ ಅನುದಾನ ಘೋಷಣೆ ಮಾಡಿದೆ.2026 -27 ನೇ ಸಾಲಿನಲ್ಲಿ ಮೊದಲ ಹಂತದಲ್ಲಿ 2 ಕೋಟಿ ಅನುದಾನ ಬಿಡುಗಡೆ ಮಾಡಿದೆ.

ಬೈಂದೂರು ತಾಲೂಕು ರೈತ ಸಂಘ ಸೇರಿದಂತೆ ವಿವಿಧ ಸಂಘಟನೆಗಳು ಬೈಂದೂರು ಸಮುದಾಯ ಆರೋಗ್ಯ ಕೇಂದ್ರವನ್ನು ತಾಲೂಕು ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸಲು ಹಲವು ಬಾರಿ ಒತ್ತಯಿಸಿದ್ದವು.ತಾಲೂಕು ಕೇಂದ್ರವಾದ ಬೈಂದೂರಿಗೆ ಆಸ್ಪತ್ರೆ ಮೇಲ್ದರ್ಜೆಗೇರಿಸುವ ಮೂಲಕ ಗ್ರಾಮೀಣ ಭಾಗದ ಜನರಿಗೆ ಇನ್ನಷ್ಟು ಅನುಕೂಲವಾಗಲಿದೆ.

ಆರೋಗ್ಯ ಸಚಿವರಾದ ಯು.ಟಿ ಖಾದರ್ ರವರ ಅನುಮೋದನೆಯೊಂದಿಗೆ ರಾಜ್ಯದ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅನುದಾನ ಬಿಡುಗಡೆ ಮಾಡಿದ್ದಾರೆ.ಇದರಿಂದಾಗಿ ಬೈಂದೂರಿನ ಬಹುದಿನದ ಕನಸು ಈಡೇರಿದಂತಾಗಿದೆ.

ವರದಿ/ಗಿರಿ ಶಿರೂರು

Leave a Reply

Your email address will not be published. Required fields are marked *

17 + two =