ಬೈಂದೂರು: ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರ ಪಡೆಯಲಿದೆ ಕೇಂದ್ರ ಹಾಗೂ ರಾಜ್ಯ ಸರಕಾರದ ಸಾಧನೆಗಳು ಜನಸಾಮಾನ್ಯರ ಮನಸ್ಸಿನಲ್ಲಿದೆ.ಯುವಕರ,ದಮನಿತರ ದ್ವನಿಯಾಗಿ ಸಂಘದ ಒಬ್ಬ ಸಾಮಾನ್ಯ ಕಾರ್ಯಕರ್ತ ಗುರುರಾಜ ಗಂಟಿಹೊಳೆಯವರಿಗೆ ಪಕ್ಷ ಅವಕಾಶ ನೀಡಿದೆ.ಇದು ಕಾರ್ಯಕರ್ತರ ಗೆಲುವಾಗಬೇಕು.ಬೈಂದೂರು ಸೇರಿದಂತೆ ರಾಜ್ಯದಲ್ಲಿ ಬಿಜೆಪಿ ನಿಶ್ಚಿತವಾದ ಬಹುಮತ ಗಳಿಸಲಿದೆ.ಕಾರ್ಯಕರ್ತರು ಸಮರ್ಪಣಾ ಭಾವದಿಂದ ಕೆಲಸ ನಿರ್ವಹಿಸಬೇಕು ಎಂದು ರಾಜ್ಯ ಯುವಮೋರ್ಚಾ ಅಧ್ಯಕ್ಷ ತೇಜಸ್ವಿ ಸೂರ್ಯ ಹೇಳಿದರು.ಅವರು ಬೈಂದೂರು ಬಿಜೆಪಿ ಕಛೇರಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿ ಬಹುತೇಕ ಹೊಸ ಅಭ್ಯರ್ಥಿಗಳಿಗೆ ಬಿಜೆಪಿ ಅವಕಾಶ ನೀಡಿದೆ.ಮರವಂತೆ ಮೀನುಗಾರರ ಚುನಾವಣೆ ಬಹಿಷ್ಕಾರ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು ಕೇಂದ್ರ ಹಾಗೂ ರಾಜ್ಯ ಸರಕಾರ ಮೀನುಗಾರರ ಅಭಿವೃದ್ದಿಗೆ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ.ಕರಾವಳಿ ಭಾಗದ ಅಭಿವೃದ್ದಿಗೆ ವಿಶೇಷ ಆದ್ಯತೆ ನೀಡಲಾಗಿದೆ.ಮೀನುಗಾರರ ವಿಶ್ವಾಸದೊಂದಿಗೆ ಬಿಜೆಪಿ ಭರವಸೆ ಈಡೇರಿಸಲಿದೆ ಎಂದರು.
ಬಿಜೆಪಿ ತಾರಾ ಪ್ರಚಾರಕಿ ಶ್ರುತಿ ಮಾತನಾಡಿ ಬೈಂದೂರು ಕ್ಷೇತ್ರ ಈ ಬಾರಿ ರಾಜ್ಯಮಟ್ಟದಲ್ಲಿ ಸುದ್ದಿಯಾಗಿದೆ.ಸಂಘದ ಒಬ್ಬ ಸಾಮಾನ್ಯ ಕಾರ್ಯಕರ್ತನಿಗೆ ಅವಕಾಶ ನೀಡಿರುವುದು ಅದು ಬಿಜೆಪಿಯಿಂದ ಮಾತ್ರ ಸಾಧ್ಯ.ಹೀಗಾಗಿ ಕಾರ್ಯಕರ್ತರು ಸಂಘಟನಾತ್ಮಕ ಹೋರಾಟದ ಮೂಲಕ ಬಿಜೆಪಿ ಗೆಲುವು ಸಾಧಿಸಲಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಬೈಂದೂರು ಬಿಜೆಪಿ ಅಭ್ಯರ್ಥಿ ಗುರುರಾಜ ಗಂಟಿಹೊಳೆ,ಬೈಂದೂರು ಮಂಡಲದ ಚುನಾವಣಾ ಪ್ರಭಾರಿ ಕ್ಯಾ.ಬ್ರಿಜೇಶ್ ಚೌಟ,ಬೈಂದೂರು ಬಿಜೆಪಿ ಮಂಡಲದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ,ಕಾರ್ಯದರ್ಶಿ ಪ್ರಿಯದರ್ಶಿನಿ ದೇವಾಡಿಗ,ಸದಾನಂದ ಉಪ್ಪಿನಕುದ್ರ ಹಾಜರಿದ್ದರು.
News/Girish shiruru