ಬೈಂದೂರು: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬೈಂದೂರು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಇಂದು ಮಸ್ಟರಿಂಗ್ ನಡೆಯಿತು.ಬೈಂದೂರು ಕ್ಷೇತ್ರದ 246 ಮತಗಟ್ಟೆಗಳಿಗೆ ನಿಯೋಜಿಸಿದ ಅಧಿಕಾರಿಗಳು,ಸಿಬಂದಿಗಳು ಪಾಲ್ಗೊಂಡಿದ್ದಾರೆ.ಐದು ಅತೀ ಸೂಕ್ಷ್ಮ ಮತಗಟ್ಟೆಗಳಿದ್ದು 44 ಸೂಕ್ಷ್ಮ ಮತಗಟ್ಟೆಗಳಾಗಿ ಗುರುತಿಸಲಾಗಿದೆ.ಇಲ್ಲಿ ಹೆಚ್ಚಿನ ಭದ್ರತೆಗಾಗಿ ಸಿಎಪಿಎಫ್ ತುಕಡಿ,ಹೆಚ್ಚುವರಿ ಪೊಲೀಸ್ ಸಿಬಂದಿಗಳನ್ನು ನಿಯೋಜಿಸಲಾಗಿದೆ.ಮೇ.13 ರಂದು ಉಡುಪಿಯ ಸೈಂಟ್ ಸಿಸಿಲಿ ಶಿಕ್ಷಣ ಸಂಸ್ಥೆಯಲ್ಲಿ ಮತ ಎಣಿಕೆ ನಡೆಯಲಿದೆ.

ಪೂರ್ಣಗೊಂಡ ತಯಾರಿ; ಬೈಂದೂರು ವಿಧಾಸಭಾ  ಕ್ಷೇತ್ರದ 246 ಮತಗಟ್ಟೆಗಳಲ್ಲಿಯೂ ಮೇ 10 ರ ಮತದಾನಕ್ಕೆ ಸಕಲ ಸಿದ್ಧತೆಗಳು ಪೂರ್ಣಗೊಂಡಿದೆ. 123 ಮತಗಟ್ಟೆಗಳಲ್ಲಿ ವೆಬ್ ಕಾಸ್ಟಿಂಗ್ ಮಾಡಲಾಗಿದೆ.ರಾಜ್ಯ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳು ನೇರ ಪ್ರಸಾರದ ಮೂಲಕ ವೀಕ್ಷಿಸಬಹುದಾಗಿದೆ ಎಂದು ಬೈಂದೂರು ಚುನಾವಣಾಧಿಕಾರಿ ಜಗದೀಶ್ ಗಂಗಣ್ಣನವರ್ ತಿಳಿಸಿದ್ದಾರೆ.

ನಿಯಮ ಉಲ್ಲಂಘಿಸಿದರೆ ದೂರು ನೀಡಿ: ಮತದಾನದ ಹಿಂದಿನ ದಿನ,ಮತದಾನದ ದಿನ ಯಾವುದಾದರೂ ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿರುವುದು ಕಂಡು ಬಂದಲ್ಲಿ ಹಾಗೂ ಕಾನೂನು ಸುವ್ಯವಸ್ಥೆಗೆ ವಿರುದ್ಧವಾದ ಪ್ರಕರಣಗಳು ಕಂಡು ಬಂದಲ್ಲಿ ಚುನಾವಣಾಧಿಕಾರಿಗಳ ಕಚೇರಿಯ ಕಂಟ್ರೋಲ್ ರೂಂ ನಂಬರ್ : 08254 – 251657 ಅಥವಾ ವಾಟ್ಸ್‌ಅಪ್ ನಂಬರ್:9380753009 ಗೆ ಸಂಪರ್ಕಿಸಬಹುದಾಗಿದೆ ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.

ಬೈಂದೂರು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸಿಬಂದಿಗಳಿಗೆ ಊಟ,ತಿಂಡಿ ವ್ಯವಸ್ಥೆ ಮಾಡಲಾಗಿದೆ.ಬೈಂದೂರು ಕ್ಷೇತ್ರದಲ್ಲಿ ಚುನಾವಣೆ ಸಮರ್ಪಕವಾಗಿ ನಡೆಯಲು ಬೇಕಾಗಿರುವ ಎಲ್ಲಾ ಕ್ರಮಗಳನ್ನು ಕೈಗೊಂಡಿದ್ದು  ಪೂರ್ಣ ತಯಾರಿ ಅಂತಿಮಗೊಂಡಿದೆ ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.

News/pic: Giri shiruru

 

 

 

Leave a Reply

Your email address will not be published.

11 − nine =