ಬೈಂದೂರು: ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಮದ್ಯಾಹ್ನ 1 ಗಂಟೆಯವರೆಗೆ 45% ಶೇ. ಮತದಾನ ನಡೆದಿದೆ.ಎಲ್ಲಾ ಬೂತ್ಗಳಲ್ಲಿ ಮತದಾರರು ಉತ್ಸಾಹದಿಂದ ಭಾಗವಹಿಸಿದ್ದಾರೆ.ಕರಾವಳಿಯುದ್ದಕ್ಕೂ ಹೋಲಿಸಿದರೆ ಮಲೆನಾಡು ಭಾಗದಲ್ಲಿ ಬೆಳಿಗ್ಗೆಯಿಂದಲೇ ಮತಗಟ್ಟೆಯಲ್ಲಿ ಮತದಾರರ ಸಾಲು ಕಂಡುಬಂದಿದೆ.ಬೈಂದೂರು ಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿ ಕೆ.ಗೋಪಾಲ ಪೂಜಾರಿ ಕನ್ಯಾನ ಮತಗಟ್ಟೆಯಲ್ಲಿ ಮತದಾನ ಮಾಡಿದರು, ಬಿಜೆಪಿ ಅಭ್ಯರ್ಥಿ ಗುರುರಾಜ ಗಂಟಿಹೊಳೆ ಕಂಚಿಕಾನ್ ಮತಗಟ್ಟೆಯಲ್ಲಿ ಮತದಾನ ಮಾಡಿದರು ಹಾಗೂ ಚಿತ್ರನಟ ರಿಷಬ್ ಶೆಟ್ಟಿ ಕೆರಾಡಿಯಲ್ಲಿ ಮತದಾನ ಮಾಡಿದರು.
ಜಿಲ್ಲಾಡಳಿತ ಮತಗಟ್ಟೆಯಲ್ಲಿ ಅಧಿಕಾರಿಗಳಿಗೆ ಹಾಗೂ ಸಾರ್ವಜನಿಕರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಿದೆ.ಭದ್ರತಾ ವ್ಯವಸ್ಥೆ ಅತ್ಯುತ್ತಮವಾಗಿದೆ.ಸಖೀ ಮತಗಟ್ಟೆ ಕೇಂದ್ರವನ್ನು ಅತ್ಯಾಕರ್ಷಕವಾಗಿ ರೂಪಿಸಲಾಗಿದೆ.ಆರೋಗ್ಯ ತಪಾಸಣೆ,ಸೆಲ್ಪಿ ಕೌಂಟರ್ ಸೇರಿದಂತೆ ಹಲವು ವಿಶೇಷತೆ ಹೊಂದಿದೆ.ಪ್ರತಿ ಬೂತ್ಗಳಲ್ಲೂ ಕಾರ್ಯಕರ್ತರು ಉತ್ಸಾಹದಿಂದ ಕೆಲಸ ನಿರ್ವಹಿಸುತ್ತಿರುವುದು ಕಂಡುಬಂದಿದೆ.ಬಹುತೇಕ ಕಡೆಗಳಲ್ಲಿ ಶಾಂತಿಯುತವಾಗಿ ಮತದಾನ ನಡೆಯುತ್ತಿದೆ.
News/pic: Giri shiruru