ಶಿರೂರು: ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಶಿರೂರಿನಲ್ಲಿ ಶಾಲಾ ಆರಂಭೋತ್ಸವ ಕಾರ್ಯಕ್ರಮ ನಡೆಯಿತು.ಶಿರೂರು ಗ್ರಾಮ ಪಂಚಾಯತ್ ಸದಸ್ಯ ಉದಯ ಪೂಜಾರಿ ವಿದ್ಯಾರ್ಥಿಗಳಿಗೆ ಪುಷ್ಪ ನೀಡುವ ಮೂಲಕ ಚಾಲನೆ ನೀಡಿ ಮಾತನಾಡಿ ಇಂದು ಸರಕಾರಿ ಶಾಲೆಗಳು ಎಲ್ಲ ರೀತಿಯಲ್ಲು ಸುಸಜ್ಜಿತವಾಗಿದೆ.ಮೂಲ ಸೌಲಭ್ಯಗಳ ಕೊರತೆ ಇಲ್ಲವಾಗಿದೆ.ಖಾಸಗಿ ಶಾಲೆಗಳಿಗಿಂತ ಉತ್ತಮವಾಗಿದ್ದು ತರಬೇತಿ ಅನುಭವ ಪಡೆದ ಶಿಕ್ಷಕರಿದ್ದಾರೆ.ಆದರೂ ಪೋಷಕರು ಖಾಸಗಿ ಶಿಕ್ಷಣ ಸಂಸ್ಥೆಗಳತ್ತ ಒಲವು ತೋರುತ್ತಿದ್ದು ಅರ್ಥವಾಗುತ್ತಿಲ್ಲ.ವಿದ್ಯಾರ್ಥಿಗಳು ಸರಕಾರಿ ಶಾಲೆಗಳಲ್ಲಿ ಅತೀ ಹೆಚ್ಚಿನ ಅಂಕ ಪಡದು ಉತ್ತಿರ್ಣರಾಗಿ ಸರಕಾರಿ ಶಾಲೆಯ ಗೌರವ ಉಳಿಸಬೇಕಾದದ್ದು ವಿದ್ಯಾರ್ಥಿಗಳದ್ದಾಗಿದೆ ಎಂದರು.

ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷ ರಘುವೀರ ಶೇಟ್,ಎಸ್.ಡಿ.ಎಮ್.ಸಿ ಸದಸ್ಯರುಗಳಾದ ಚಂದ್ರ ಕೊಠಾರಿ, ದಿನೇಶ್ ಪೂಜಾರಿ,  ಸದಾನಂದ ಮೇಸ್ತ ಮೊದಲಾದವರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತ್ರ ಹಾಗೂ ಪಠ್ಯ ಪುಸ್ತಕ ಗಳನ್ನು ವಿತರಿಸುವುದರೊಂದಿಗೆ ಶಾಲೆಯ ಹಳೆ ವಿದ್ಯಾರ್ಥಿ ಲೀಲಾವತಿ ವಿಶ್ವನಾಥ ಹೆಗ್ಗಡೆ ಇವರು ನೀಡಿರುವ  ಕ್ರೀಡಾ ಪರಿಕರಗಳನ್ನು ಹಸ್ತಾಂತರಿಸಲಾಯಿತು.

ಮುಖ್ಯ ಶಿಕ್ಷಕ ಶಂಕರ ಶಿರೂರು ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು.ಶಿಕ್ಷಕ ಸಿ.ಎನ್. ಬಿಲ್ಲವ ಕಾರ್ಯಕ್ರಮ ನಿರ್ವಹಿಸಿದರು. ಶಿಕ್ಷಕಿ ಜಯಶ್ರೀ ದಾಸ್ ಪೈ ವಂದಿಸಿದರು.

 

 

Leave a Reply

Your email address will not be published.

5 × 1 =