ಬೈಂದೂರು: ತಾಲೂಕು ಕೇಂದ್ರವಾದ ಬೈಂದೂರಿನಲ್ಲಿ 77ನೇ ಸ್ವಾತಂತ್ರೋತ್ಸವವನ್ನು ಬೈಂದೂರು ಗಾಂಧಿ ಮೈದಾನದಲ್ಲಿ ಆಚರಿಸಲಾಯಿತು.
ಬೈಂದೂರು ತಹಶೀಲ್ದಾರ ಶ್ರೀಕಾಂತ ಹೆಗ್ಡೆ ದ್ವಜಾರೋಹಣಗೈದರು.ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಮಾತನಾಡಿ ಸ್ವಾತಂತ್ರ್ಯ ಹೋರಾಟದಲ್ಲಿ ಅನೇಕ ನಾಯಕರ ಪರಿಶ್ರಮ ಹೊಂದಿದೆ.ಇದರ ಗೌರವ ಹೆಚ್ಚಿಸಬೇಕಾದರೆ ದೇಶದ ಆಶೋತ್ತರಗಳಿಗೆ ಬದ್ದರಾಗಿ,ನೆಲದ ಕಾನೂನು ಹಾಗೂ ಸಂವಿದಾನದ ಮೇಲೆ ಗೌರವಕೊಟ್ಟು ಪರಸ್ಪರ ಪ್ರೀತಿ ವಿಶ್ವಾಸದಿಂದ ಬದುಕಬೇಕು.ದೇಶ ಪ್ರಗತಿಯಾಗಬೇಕಿದ್ದರೆ ನಮ್ಮ ಮನೆಗಳಲ್ಲಿ ಜಾಗೃತರಾಗಿ ಸ್ವಚ್ಚತೆಗೆ ಒತ್ತು ನೀಡಬೇಕು.ಸರ್ವರೂ ಸಹಭಾಳ್ವೆಯಿಂದ ಬಾಳೋಣ ಎಂದರು.
ಈ ಸಂದರ್ಭದಲ್ಲಿ ಬೈಂದೂರು ತಾ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭಾರತಿ,ಬೈಂದೂರು ವೃತ್ತನಿರೀಕ್ಷಕ ಸವಿತ್ರ ತೇಜ್ ಬೈಂದೂರು ಪಟ್ಟಣ ಪಂಚಾಯತ್ ಅಧಿಕಾರಿ ನವೀನ್ ಕುಮಾರ್,ಬೈಂದೂರು ಉಪ ತಹಶೀಲ್ದಾರ ಭೀಮಪ್ಪ ಬಿಲ್ಲಾರ್,ಉದ್ಯಮಿ ದಿವಾಕರ ಶೆಟ್ಟಿ ನೆಲ್ಯಾಡಿ ಹಾಗೂ ಕಂದಾಯ ಇಲಾಖೆಯ ಸಿಬಂದಿಗಳು ಹಾಜರಿದ್ದರು.
ಎಸ್.ಎಸ್.ಎಲ್.ಸಿ ವಿಭಾಗದಲ್ಲಿ ಅತ್ಯುತ್ತಮ ಅಂಕ ಪಡೆದ ನಾಲ್ಕು ವಿದ್ಯಾರ್ಥಿಗಳನ್ನು ಸಮ್ಮಾನಿಸಲಾಯಿತು.ಬಳಿಕ ಆರಕ್ಷಕ ಠಾಣೆ,ಅಗ್ನಿಶಾಮಕ ದಳ ಹಾಗೂ ವಿದ್ಯಾರ್ಥಿಗಳಿಂದ ಪಥ ಸಂಚಲನ ನಡೆಯಿತು.
ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥ ಎಮ್.ಜಿ ಸ್ವಾಗತಿಸಿದರು.ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಚಂದ್ರಶೇಖರ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.ಶಿಕ್ಷಕ ಗಣಪತಿ ಹೋಬಳಿದಾರ್ ವಂದಿಸಿದರು.
News/Giri shiruru