ಬೈಂದೂರು: ಜಿಲ್ಲಾಡಳಿತ ಉಡುಪಿ,ಜಿ.ಪಂ ಉಡುಪಿ,ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಮತ್ತು ತಾ.ಪಂ ಬೈಂದೂರು ಹಾಗೂ ಶಿರೂರು ಗ್ರಾಮ ಪಂಚಾಯತ್ ಇದರ ಗೃಹಲಕ್ಷ್ಮೀ ಯೋಜನೆ ಅನುಷ್ಠಾನ ಕಾರ್ಯಕ್ರಮ ಬೈಂದೂರಿನ ಅಂಬೇಡ್ಕರ್ ಸಭಾಭವನ ಹಾಗೂ ಶಿರೂರಿನ ಪೇಟೆ ಶ್ರೀ ವೆಂಕಟರಮಣ ಸಭಾಭವನದಲ್ಲಿ ನಡೆಯಿತು.
ಬೈಂದೂರು ತಹಶೀಲ್ದಾರ ಶ್ರೀಕಾಂತ ಹೆಗ್ಡೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ತಾ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭಾರತಿ,ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ನವೀನ್ ಕುಮಾರ್,ಅಂಗನವಾಡಿ ಮೇಲ್ವಿಚಾರಕಿ ರೇವತಿ,ಶಿರೂರು ಗ್ರಾ.ಪಂ ಅಧ್ಯಕ್ಷೆ ನಾಗರತ್ನ ಆಚಾರ್ಯ,ನೋಡೆಲ್ ಅಧಿಕಾರಿ ಸತ್ಯನಾರಾಯಣ ಕೊಡೇರಿ,ಶಿರೂರು ಗ್ರಾ.ಪಂ ಉಪಾಧ್ಯಕ್ಷ ಕಾಪ್ಸಿ ನೂರ್‌ಮಹ್ಮದ್,ಮಾಜಿ ಗ್ರಾ.ಪಂ ಅಧ್ಯಕ್ಷೆ ಜಿ.ಯು ದಿಲ್‌ಶಾದ್ ಬೇಗಂ, ,ಪಂಚಾಯತ್ ಅಭಿವೃದ್ದಿ ಅಧಿಕಾರಿ ರಾಜೇಂದ್ರ,ಕಾರ್ಯದರ್ಶಿ ಮುಕ್ತಾ ನಾಯ್ಕ ಹಾಗೂ ಗ್ರಾ.ಪಂ ಸದಸ್ಯರು ಹಾಜರಿದ್ದರು.