ಬೈಂದೂರು: ಬೈಂದೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ರತ್ತು ಬಾಯಿ ಜನತಾ ಪ್ರೌಡ ಶಾಲೆಯಲ್ಲಿ ನಡೆಯಿತು. ಜನತಾ ಹೆಮ್ಮಾಡಿಯ ವಿ.ವಿ. ವಿ.ಮಂಡಳಿಯ ನಿರ್ದೇಶಕ ರಘುರಾಮ ಕೆ.ಪೂಜಾರಿ ಕ್ಸಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಉದ್ಘಾಟಿಸಿ ಮಾತನಾಡಿ ಎಳವೆಯಲ್ಲಿ ಮಕ್ಕಳ ಪ್ರತಿಭೆ ಗುರುತಿಸಲು ಸಹಕಾರಿಯಾಗಿದೆ. ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಕ್ರೀಡೆ, ಸಾಂಸ್ಕೃತಿಕವಾಗಿಯು ತಮ್ಮಲ್ಲಿರುವ ಪ್ರತಿಭೆಯನ್ನು ಅನಾವರಣಗೊಳಿಸಲು ಅವಕಾಶಗಳನ್ನು ಒದಗಿಸಿಕೊಡಲಾಗುತ್ತಿದ್ದು ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಕೀರ್ತಿ ತರುವ ಕೆಲಸ ಮಾಡಬೇಕು. ಸೋಲು ಎದುರಾದರೆ ಕುಗ್ಗದೆ, ಸೋಲೆ ಗೆಲುವಿನ ಮೆಟ್ಟಿಲು ಎನ್ನುವ ಮನೋಭಾವದಿಂದ ಭಾಗವಹಿಸಬೇಕು. ಸವಾಲುಗಳನ್ನು ಎದುರಿಸಿ ಮುನ್ನೆಡೆಯಬೇಕು ಹಾಗೂ ಶಿಕ್ಷಕರು ಮಕ್ಕಳಲ್ಲಿನ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಬೇಕು ಎಂದರು.
ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ್ ನಾಯ್ಕ, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಹೆಮ್ಮಾಡಿ ಪ್ರಾಥಮಿಕ ಶಾಲಾ ಶಿಕ್ಷಕ ಸಂಘದ ಅಧ್ಯಕ್ಷರಾದ ಶೇಖರ್ ಪೂಜಾರಿ,ಜನತಾ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಮಂಜು ಕಾಳಾವರ,ರೊಟೇರಿಯನ್ ಸೋಮನಾಥನ್,ಕ್ಷೇತ್ರ ಸಂಪನ್ಮೂಲ ಅಧಿಕಾರಿ ಮಂಜುನಾಥ್ ನಾಯಕ್,ಬೈಂದೂರು ವೃತ್ತ ಸಂಯೋಜಕ ಚಂದ್ರ ದೇವಾಡಿಗ,ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕಾರ್ಯದರ್ಶಿ ಗಣಪತಿ ಹೋಬಳಿದಾರ್,ಮುಖ್ಯ ಶಿಕ್ಷಕ ಸಂಘದ ಅಧ್ಯಕ್ಷ ಜಯಾನಂದ ಪಟಗಾರ್,ಮುಖ್ಯ ಶಿಕ್ಷಕ ಸಂಘದ ಉಪಾಧ್ಯಕ್ಷ ಪ್ರಭಾಕರ್ ಬಿಲ್ಲವ,ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ನಾಗರತ್ನ ,ಬೈಂದೂರು ಮಾದರಿ ಶಾಲೆಯ ಮುಖ್ಯ ಶಿಕ್ಷಕ ಜನಾರ್ಧನ್ ದೇವಾಡಿಗ ,ಟೀಚರ್ಸ್ ಕೋ ಆಪರೇಟಿವ್ ಬ್ಯಾಂಕ್ ನಿರ್ದೇಶಕ ರಾಘವೇಂದ್ರ ದೇವಾಡಿಗ,ಮೊದಲಾದವರು ಉಪಸ್ಥಿತರಿದ್ದರು.
ಬೈಂದೂರು ವಲಯದ ಪ್ರತಿಭಾ ಕಾರಂಜಿ ನೋಡಲ್ ಅಧಿಕಾರಿ ರಾಮಕೃಷ್ಣ ದೇವಾಡಿಗ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಶಾಲಾ ಮುಖ್ಯ ಶಿಕ್ಷಕ ಆನಂದ್ ಮದ್ದೋಡಿ ಸ್ವಾಗತಿಸಿದರು.ಸಮೂಹ ಸಂಪನ್ಮೂಲ ವ್ಯಕ್ತಿ ಸಿ.ಎನ್. ಬಿಲ್ಲವ ಕಾರ್ಯಕ್ರಮ ನಿರ್ವಹಿಸಿದರು.ಶಿಕ್ಷಕ ಪ್ರಕಾಶ್ ಮಾಕೋಡಿ ವಂದಿಸಿದರು.