ಬೈಂದೂರು: ಸಹಕಾರಿ ಸಂಸ್ಥೆಗಳನ್ನು ಮುನ್ನೆಡುಸುವಾಗ ಸವಾಲುಗಳು ಸಹಜ. ಸಹಕಾರಿ ಕ್ಷೇತ್ರದಲ್ಲಿ ಸಾಮಾಜಿಕ ಚಿಂತನೆ ಮೂಲಕ ಅಭಿವೃದ್ದಿ ಸಾಧ್ಯ. ಕಳೆದ 21 ವರ್ಷಗಳಿಂದ ಗ್ರಾಮೀಣ ಭಾಗದಲ್ಲಿ ಸಮಾಜಮುಖಿ ಚಿಂತನೆಯೊಂದಿಗೆ ಕಾರ್ಯ ನಿರ್ವಹಿಸಿದ ಹೆಮ್ಮೆಯಿದೆ.ಪ್ರಾಮಾಣಿಕ ಕಾರ್ಯದಕ್ಷತೆ ಮತ್ತು ಗುಣಮಟ್ಟದ ಸೇವೆಯಿಂದ ಸಂಸ್ಥೆಯ ಅಭಿವೃದ್ದಿ ಸಾಧ್ಯ ಎಂದು ಸಾಗರ್ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ ಅಧ್ಯಕ್ಷ ಹಾಗೂ ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ನುಡಿದರು ಅವರು ಬೈಂದೂರು ಸಾಗರ್ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿಯ ಪ್ರದಾನ ಕಛೇರಿಯಲ್ಲಿ ನಡೆದ 21ನೇ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ ಸಂಘದ ಸದಸ್ಯರಿಗೆ ಶೇ.13% ಡಿವಿಡೆಂಡ್ ಘೋಷಣೆ ಮಾಡಿದರು ಹಾಗೂ ಸಂಘವು ವರದಿ ವರ್ಷದಲ್ಲಿ ಒಟ್ಟು 243,18,15,564 ರಷ್ಟು ವ್ಯವಹಾರ ನಡೆಸಿ ರೂಪಾಯಿ 44,09,724.15 ರಷ್ಟು ಲಾಭ ಗಳಿಸಿದೆ ಎಂದರು.
ವೇದಿಕೆಯಲ್ಲಿ ನಿರ್ದೇಶಕರಾದ ಕೆ.ಶಂಕರ ಪೂಜಾರಿ,ಚಿಕ್ಕು ಪೂಜಾರಿ, ಕಲ್ಪನಾ ಭಾಸ್ಕರ್,ಯು.ಕೇಶವ ಪೂಜಾರಿ,ಕೆ.ಶ್ರೀನಿವಾಸ ಪೂಜಾರಿ,ಜಯಸೂರ್ಯ ಪೂಜಾರಿ,ಶೇಖರ ಪೂಜಾರಿ ನಾಗೂರು,ಉದಯ ಜಿ.ಪೂಜಾರಿ,ವೆಂಕಟೇಶ ಮಾಚ ಪೂಜಾರಿ ಉಪಸ್ಥಿತರಿದ್ದರು.
ಈ ಸಂಧರ್ಭದಲ್ಲಿ ಸಂಘದ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಿಸಲಾಯಿತು.
ನಿರ್ದೇಶಕರಾದ ಎಸ್.ರಾಜು ಪೂಜಾರಿ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು.ಮುಖ್ಯಕಾರ್ಯ ನಿರ್ವಾಹಣಾಽಕಾರಿ ಗಣೇಶ ಬಿ.ಪೂಜಾರಿ ವಾರ್ಷಿಕ ಲೆಕ್ಕಪತ್ರ ಮಂಡಿಸಿ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು.
pic: dottaya poojari yadthre