ಬೈಂದೂರು: ಬಿಜೆಪಿ ಪಕ್ಷದಲ್ಲಿ ಮಾಜಿ ಶಾಸಕ ಬಿ.ಎಮ್.ಸುಕುಮಾರ ಶೆಟ್ಟಿ ಯವರಿಗೆ ಉತ್ತಮ ಅವಕಾಶ ನೀಡಿತ್ತು ಹಾಗೂ ಅಧಿಕಾರದ ಅವಧಿಯಲ್ಲಿ ಅತ್ಯುತ್ತಮವಾಗಿ ಬಳಸಿಕೊಂಡು ಈಗ ಪಕ್ಷಾಂತರ ಮಾಡಿ ಬಿಜೆಪಿ ಬಗ್ಗೆ ತೇಜೋವಧೆ ಮಾಡುವಂತಹ ಹೇಳಿಕೆಗಳನ್ನು ನೀಡುವುದು ಆವರ ವ್ಯಕ್ತಿತ್ವಕ್ಕೆ ಶೋಭೆಯಲ್ಲ.ಬಿಜೆಪಿ ಪಕ್ಷದ ಕುರಿತು ಮಾತನಾಡಲು ಅವರಿಗೆ ನೈತಿಕತೆಯಿಲ್ಲ ಎಂದು ಶಿವಮೊಗ್ಗ ಲೋಕಸಭಾ ಸಂಸದ ಬಿ.ವೈ ರಾಘವೇಂದ್ರ ಹೇಳಿದರು ಅವರು ಬೈಂದೂರು ತಾಲೂಕು ಆಡಳಿತ ಸೌಧದಲ್ಲಿ ಅಧಿಕಾರಿಗಳ ಸಭೆ ನಡೆಸಿ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ ಈ ಮಾತುಗಳನ್ನಾಡಿದರು ಕ್ಷೇತ್ರದ ಅಭಿವೃದ್ದಿ ಕುರಿತಂತೆ ಈಗಾಗಲೇ ಹಲವು ಬಾರಿ ಅಧಿಕಾರಿಗಳ ಸಭೆ ನಡೆಸಲಾಗಿದೆ.ಕೆಲವೊಂದು ಇಲಾಖೆಗಳಲ್ಲಿ ಸಣ್ಣಪುಟ್ಟ ತಾಂತ್ರಿಕ ಸಮಸ್ಯೆಗಳಿದ್ದರು ಸಹ ಸಂಬಂಧಿಸಿದವರ ಗಮನಕ್ಕೆ ತಾರದಿರುವುದರಿಂದ ಹಲವಾರು ಮಹತ್ವಕಾಂಕ್ಷೆ ಯೋಜನೆಗಳು ಮಂದಗತಿಯಲ್ಲಿ ಸಾಗುತ್ತಿದೆ.ಬೈಂದೂರಿನ ಅಭಿವೃದ್ದಿಯಲ್ಲಿ ಅಧಿಕಾರಿಗಳ ಇಚ್ಚಾಶಕ್ತಿ ಅಗತ್ಯ ಎಂದು ಶಿವಮೊಗ್ಗ ಲೋಕಸಭಾ ಬಿ.ವೈ ರಾಘವೇಂದ್ರ ಹೇಳಿದರು.
ಹೆದ್ದಾರಿ ಅಧಿಕಾರಿಗಳ ಸಭೆ; ಬೈಂದೂರು: ಶಿವಮೊಗ್ಗ ಲೋಕಸಭಾ ಸಂಸದ ಬಿ.ವೈ ರಾಘವೇಂದ್ರ ರಾಷ್ಟ್ರೀಯ ಹೆದ್ದಾರಿ ಸಮಸ್ಯೆ ಕುರಿತು ಅಧಿಕಾರಿಗಳ ಸಭೆ ನಡೆಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು ಈಗಾಗಲೇ ರಾಷ್ಟ್ರೀಯ ಹೆದ್ದಾರಿ ಅಪಘಾತ ನಿಯಂತ್ರಣ ಸೇರಿದಂತೆ ಸರ್ವಿಸ್ ರಸ್ತೆ ಮತ್ತು ಅಗತ್ಯ ಸೌಲಭ್ಯ ಕುರಿತು ದೆಹಲಿಯಲ್ಲಿ ಹಿರಿಯ ಅಧಿಕಾರಿಗಳ ಜೊತೆ ಮಾತನಾಡಿದ್ದೇನೆ.ಬೀದಿ ದೀಪ ಸಮಸ್ಯೆ ಸೇರಿದಂತೆ ಅಗತ್ಯ ಕ್ರಮಗಳನ್ನು ಶೀಘ್ರ ಕೈಗೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಿದರು.
ಈ ಸಂದರ್ಭದಲ್ಲಿ ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ,ವಿಧಾನ ಪರಿಷತ್ ಸದಸ್ಯೆ ಭಾರತಿ ಶೆಟ್ಟಿ,ರಾಷ್ಟ್ರೀಯ ಹೆದ್ದಾರಿ ಪ್ರೊಜೆಕ್ಟ್ ಡೈರೆಕ್ಟ್‌ರ್ ಹರಿಕೃಷ್ಣ,ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ,ಐ.ಆರ್.ಬಿ ಮುಖ್ಯ ಜನರಲ್ ಮೆನೇಜರ್ ಮೋಹನ್ ದಾಸ್,ಶ್ರೀನಿವಾಸ,ಅಮರ್ ಮುಂತಾದವರು ಹಾಜರಿದ್ದರು.
News/Giri shiruru