ಬೈಂದೂರು: ಕ್ರೀಡೆ ದೈಹಿಕ ಹಾಗೂ ಮಾನಸಿಕ ದೃಡತೆಯ ಜೊತೆಗೆ ಸಂಘಟನಾತ್ಮಕ ಚಟುವಟಿಕೆಗೆ ಪ್ರೇರಣೆಯಾಗಿದೆ.ಜಾಗತಿಕ ಮಟ್ಟದಲ್ಲಿ ಶೈಕ್ಷಣಿಕ ಮಾನದಂಡದಷ್ಟೆ ಕ್ರೀಡೆಗೂ ಕೂಡ ಪ್ರಾಮುಖ್ಯತೆ ಇದೆ.ಕ್ರೀಡೆಯ ಮುಖಾಂತರ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಹಲವು ಅವಕಾಶಗಳಿವೆ.ಕಠಿಣ ಪರಿಶ್ರಮ ಮತ್ತು ಶ್ರದ್ದೆ ಮುಖ್ಯ ಎಂದು ಕೊಲ್ಲೂರು ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯ ಜಯಾನಂದ ಹೋಬಳಿದಾರ್ ಹೇಳಿದರು ಅವರು ಸ.ಪ್ರ.ದರ್ಜೆ ಕಾಲೇಜು ಬೈಂದೂರಿನಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾಲಯ ಮತ್ತು ಸರಕಾರಿ ಪ್ರಥಮ ದರ್ಜೆ ಕಾಲೇಜು ಬೈಂದೂರು ಇದರ ವತಿಯಿಂದ ಮಂಗಳೂರು ವಿಶ್ವವಿದ್ಯಾನಿಯಲದ ಉಡುಪಿ ವಲಯ ಮಟ್ಟದ ಅಂತರ್ ಕಾಲೇಜು ಪುರುಷರ ಕಬಡ್ಡಿ ಪಂದ್ಯಾಟ ಉದ್ಘಾಟಿಸಿ ಈ ಮಾತುಗಳನ್ನಾಡಿದರು.
ಬೈಂದೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ನಾಗರಾಜ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಬೈಂದೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕಾರ್ಯಾಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘ ನಿ ಉಪ್ಪುಂದ ಅಧ್ಯಕ್ಷ ಪ್ರಕಾಶ್ಚಂದ್ರ ಶೆಟ್ಟಿ, ಉಪ್ಪುಂದ ಉದ್ಯಮಿಗಳಾದ ಯು. ಪ್ರಕಾಶ್ ಭಟ್, ದಿವಾಕರ ಶೆಟ್ಟಿ ನೆಲ್ಯಾಡಿ, ತೆಂಕನಿಡಿಯೂರು ಸ.ಪ್ರ.ದ ಕಾಲೇಜಿನ ದೈ. ಶಿ. ಸಂಚಾಲಕ ರೋಶನ್ ಕುಮಾರ್ ಶೆಟ್ಟಿ, ಬೈಂದೂರು ರೋಟರಿ ಕ್ಲಬ್ ಅಧ್ಯಕ್ಷ ಪ್ರಸಾದ್ ಪ್ರಭು ಶಿರೂರು, ಬೈಂದೂರು ಪೊಲೀಸ್ ಠಾಣಾಧಿಕಾರಿ ನಿರಂಜನ್ ಗೌಡ, ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಎಸ್.ಪ್ರವೀಣ ಚಂದ್ರ ಶೆಟ್ಟಿ, ಬೈಂದೂರು ತಾಲೂಕು ಯುವ ಜನ ಕ್ರೀಡಾ ಇಲಾಖೆಯ ಯೋಜನಾಧಿಕಾರಿ ಪ್ರಭಾಕರ್ ಎಸ್, ಬಾರ್ಕೂರು ಸ.ಪ್ರ,ದ ಕಾಲೇಜಿನ ಪ್ರಾಂಶುಪಾಲ ರಮೇಶ್ ಆಚಾರ್ಯ, ಅಜ್ಜರಕಾಡು ಸ.ಪ್ರ.ದ ಕಾಲೇಜಿನ ದೈ. ಶಿ. ಸಂಚಾಲಕ ರಾಮಚಂದ್ರ ಪಾಠಕರ್ ಉಪಸ್ಥಿತರಿದ್ದರು.
ಬೈಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕ್ರೀಡಾ ಸಮಿತಿ ಸಂಚಾಲಕ ಮೋಹನ್ ಕುಮಾರ್ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕಾಲೇಜಿನ ಉಪನ್ಯಾಸಕ ಸತೀಶ್ ಎಂ ಕಾರ್ಯಕ್ರಮ ನಿರ್ವಹಿಸಿದರು. ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕ ಪ್ರಭಾಕರ್ ವಂದಿಸಿದರು.