ಶಿರೂರು: ಜಿ.ಪಂ ಉಡುಪಿ,ಕುಟುಂಬ ಕಲ್ಯಾಣ ಇಲಾಖೆ ಉಡುಪಿ,ಜಿಲ್ಲಾ ಕುಷ್ಟರೋಗ ನಿರ್ಮೂಲನಾಧಿಕಾರಿಗಳ ಕಚೇರಿ,ತಾಲೂಕು ಆರೋಗ್ಯಾಧಿಕಾರಿಗಳು ಕುಂದಾಪುರ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಶಿರೂರು ಇದರ ಆಶ್ರಯದಲ್ಲಿ ಉಚಿತ ಚರ್ಮರೋಗ ತಪಾಸಣೆ ಮತ್ತು ಚಿಕಿತ್ಸಾ, ಶಿಬಿರ ನಡೆಯಿತು.
ಬೈಂದೂರು ರೋಟರಿ ಕ್ಲಬ್ ಅಧ್ಯಕ್ಷ ಎಸ್.ಪ್ರಸಾದ್ ಪ್ರಭು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಉಚಿತ ಆರೋಗ್ಯ ಶಿಬಿರಗಳನ್ನು ಆಯೋಜಿಸುವುದರಿಂದ ಹಲವಾರು ಬಡಜನರಿಗೆ ಸಹಕಾರಿಯಾಗುತ್ತಿದೆ.ಇಂತಹ ಕಾರ್ಯಕ್ರಮಗಳು ನಿರಂತರವಾಗಿ ನಡೆಯಲಿ ಎಂದರು.
ಶಿರೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಕಾಪ್ಸಿ ನೂರ್‌ಮಹಮ್ಮದ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಜಿಲ್ಲಾ ಕುಷ್ಟ ರೋಗ ನಿವಾರಣ ಅಧಿಕಾರಿ ಡಾ.ಲತಾ ನಾಯಕ್, ತಾಲೂಕು ಆರೋಗ್ಯ ಅಧಿಕಾರಿ ಡಾ.ಪ್ರೇಮಾನಂದ.ಶಿರೂರು ಪ್ರಾ.ಆ.ಕೇಂದ್ರದ ವೈದ್ಯಾಧಿಕಾರಿ ಡಾ.ಸಹನಾ ಕೆ , ಗ್ರಾಮ ಪಂಚಾಯತ್ ಸದಸ್ಯರು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ನೂರಾರು ಸಾರ್ವಜನಿಕರು ಇದರ ಸದುಪಯೋಗ ಪಡೆದರು.ಆರೋಗ್ಯ ಇಲಾಖೆಯ ಸಿಬಂದಿ ನಾಗರಾಜ್ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು.