ಶಿರೂರು; ಗ್ರಾಮೀಣ ಭಾಗ ಸೇರಿದಂತೆ ಶೈಕ್ಷಣಿಕ ವ್ಯವಸ್ಥೆಯಲ್ಲಿ ಕನ್ನಡ ಮಾಧ್ಯಮ ಶಾಲೆಗಳ ಅಭಿವೃದ್ದಿಯಾದಾಗ ಉತ್ತಮ ಶೈಕ್ಷಣಿಕ ವಾತಾವರಣ ನಿರ್ಮಾಣ ಸಾಧ್ಯ.ಸರಕಾರ ಈ ನಿಟ್ಟಿನಲ್ಲಿ ಹತ್ತು ಹಲವು ಯೋಜನೆಗಳನ್ನು ರೂಪಿಸುತ್ತಿದೆ.ಶಿಕ್ಷಣಾಭಿಮಾನಿಗಳ ಸಹಕಾರವಿದ್ದಾಗ ಮಾತ್ರ ಕನ್ನಡ ಮಾದ್ಯಮ ಶಾಲೆಗಳನ್ನು ಅತ್ಯುತ್ತಮವಾಗಿ ಬೆಳೆಸಲು ಸಾಧ್ಯ ಎಂದು ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಹೇಳಿದರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅರಮನೆಹಕ್ಲು ಶಿರೂರು ಇದರ ವಿವೇಕ ಕೊಠಡಿ ಉದ್ಘಾಟಿಸಿ ಈ ಮಾತುಗಳನ್ನಾಡಿದರು.
ಮುಖ್ಯ ಅತಿಥಿಗಳಾಗಿ ಜಿ.ಪಂ ಮಾಜಿ ಸದಸ್ಯ ಸುರೇಶ ಬಟ್ವಾಡಿ,ತಾ.ಪಂ ಮಾಜಿ ಸದಸ್ಯ ಪುಷ್ಪರಾಜ್ ಶೆಟ್ಟಿ,ಶಿರೂರು ಗ್ರಾ.ಪಂ ಅಧ್ಯಕ್ಷೆ ನಾಗರತ್ನ ಆಚಾರ್ಯ,ಪಿ.ಡಿ.ಓ ರಾಜೇಂದ್ರ,ಗ್ರಾ.ಪಂ ಸದಸ್ಯರಾದ ಸಂದ್ಯಾ ವಿಶ್ವನಾಥ,ಕಾವೇರಿ,ಬಾಬು ಮೊಗೇರ್,ಶಿರೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಸಹನಾ,ಇ.ಸಿ.ಓ ಚಂದ್ರ ದೇವಾಡಿಗ,ದಿನೇಶ್ ಕುಮಾರ್ ಶಿರೂರು,ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷ ಶಂಕರ ಮೇಸ್ತ,ಮಾಜಿ ಎಸ್.ಡಿ.ಎಮ್.ಸಿ ಅಧ್ಯಕ್ಷ ಮನೋಜ್ ಕುಮಾರ್,ದಯಾನಂದ ಪೂಜಾರಿ,ಅಶೋಕ ಶೆಟ್ಟಿ ಕಾರಿಕಟ್ಟೆ ಉಪಸ್ಥಿತರಿದ್ದರು.
ಗ್ರಾ.ಪಂ ಸದಸ್ಯ ರವೀಂದ್ರ ಶೆಟ್ಟಿ ಆರ್‍ಮಕ್ಕಿ ಪ್ರಾಸ್ತಾವಿಕ ಮಾತುಗಳನ್ನಾಡಿದರು.ಶಾಲಾ ಮುಖ್ಯ ಶಿಕ್ಷಕಿ ಸೀಮಾ ನಾಯ್ಕ ಸ್ವಾಗತಿಸಿದರು.ಯಶೋಧಾ ಕಾರ್ಯಕ್ರಮ ನಿರ್ವಹಿಸಿದರು.ಶ್ರೀಕಾಂತ ವಂದಿಸಿದರು.
News/Giri shiruru