ಬೈಂದೂರು: ರಾಜ್ಯದಲ್ಲಿ ಈ ಹಿಂದೆ ಬಿಜೆಪಿ ಸರಕಾರ ಅಧಿಕಾರದಲ್ಲಿದೆ.ಬೈಂದೂರು ಕ್ಷೇತ್ರದಲ್ಲಿ ಬಿಜೆಪಿ ಶಾಸಕರದ್ದೂ ಕೂಡ ಇತರ ಪಕ್ಷದ ಕಾರ್ಯಕರ್ತರಿಗೆ ತೊಂದರೆ ಕೊಟ್ಟಿಲ್ಲ.ಅಧಿಕಾರಿಗಳನ್ನು ಬಳಸಿಕೊಂಡು ಜನಸಾಮಾನ್ಯರ ವ್ಯವಹಾರಗಳಿಗೆ ಅಡ್ಡಿಪಡಿಸುವುದು ಮತ್ತು ಕಾಂಗ್ರೆಸ್ ಮುಖಂಡರ ದ್ವೇಷ ರಾಜಕಾರಣ ಸರಿಯಲ್ಲ.ಈ ಬಗ್ಗೆ ಖಂಡಿಸುತ್ತೇನೆ ಹಾಗೂ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಇತರ ಕ್ಷೇತ್ರಗಳಿಗೆ ನೀಡುವ ರೀತಿಯಲ್ಲಿ ಬೈಂದೂರು ಕ್ಷೇತ್ರಕ್ಕೂ ಕೂಡ ಅನುದಾನ ನೀಡಬೇಕು.ಈಗಾಗಲೇ ಶಾಸಕರು ಬಗರ್‌ಹುಕುಂ ಸಮಿತಿಗೆ ಅದ್ಯಕ್ಷರಾಗುವುದು ಸಹಜ ಆದರೆ ಬೈಂದೂರು ಕ್ಷೇತ್ರದಲ್ಲಿ ಶಾಸಕರನ್ನು ಕಡೆಗಣಿಸಿ ಪ್ರತ್ಯೇಕ ಅಧ್ಯಕ್ಷರನ್ನು ನೇಮಿಸಿರುವುದು ಎಷ್ಟರ ಮಟ್ಟಿಗೆ ಸರಿಯಿದೆ ಎಂದು ಸರಕಾರ ಗಮನಿಸಬೇಕು ಎಂದು ಬೈಂದೂರು ಬಿಜೆಪಿ ಮಂಡಲದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಹೇಳಿದರು ಅವರು ಗುರುವಾರ ಬೈಂದೂರು ಬಿಜೆಪಿ ಕಛೇರಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿ ಕಾಂಗ್ರೆಸ್ ಪಕ್ಷ ಬೈಂದೂರಿನಲ್ಲಿ ಮಲತಾಯಿ ದೋರಣೆ ನಡೆಯುತ್ತಿದೆ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಶರತ್ ಕುಮಾರ್ ಶೆಟ್ಟಿ ಉಪ್ಪುಂದ,ಬೈಂದೂರು ಬಿಜೆಪಿ ಮಂಡಲದ ಕಾರ್ಯದರ್ಶಿ ಪ್ರಿಯದರ್ಶಿನಿ ಬೆಸ್ಕೂರು ಹಾಜರಿದ್ದರು.
News/Giri shiruru