ಬೈಂದೂರು; ರತ್ತುಬಾಯಿ ಜನತಾ ಪ್ರೌಢಶಾಲೆ ಬೈಂದೂರು ಇದರ 2023ನೇ ಸಾಲಿನ ಶಾಲಾ ವಾರ್ಷಿಕೋತ್ಸವ ಸಮಾರಂಭ ಶಾಲಾ ಸಭಾಭವನದಲ್ಲಿ ನಡೆಯಿತು.

ಶ್ರೀ ವಿ.ವಿ.ವಿ ಹೆಮ್ಮಾಡಿ ಅಧ್ಯಕ್ಷ ಕೆ.ಗೋಪಾಲ ಪೂಜಾರಿ ಶಾಲಾ ವಾರ್ಷಿಕೋತ್ಸವವನ್ನು ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು ರತ್ತುಬಾಯಿ ಜನತಾ ಫ್ರೌಢಶಾಲೆಯ ಪ್ರತಿಭಾವಂತ ಶಿಕ್ಷಕರು ಮತ್ತು ಪಾಲಕರ ಪ್ರೋತ್ಸಾಹದಿಂದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಹೊಂದಿದೆ.ಕಠಿಣ ಪರಿಶ್ರಮ ಮತ್ತು ಪ್ರಾಮಾಣಿಕ ಪ್ರಯತ್ನದಿಂದ ಉತ್ತಮ ಸ್ಥಾನ ಪಡೆಯಲು ಸಾಧ್ಯ.ವಿದ್ಯಾರ್ಥಿಗಳು ಅವಕಾಶಗಳನ್ನು ಸದ್ಬಳಕೆ ಮಾಡಿಕೊಂಡು ಉತ್ತಮ ಸಾಧನೆ ತೋರಬೇಕು ಎಂದರು.

ಕ.ಸಾ.ಪ ಉಡುಪಿ ಜಿಲ್ಲಾ ಘಟಕದ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ದಿಕ್ಸೂಚಿ ಭಾಷಣ ಮಾಡಿದರು.

ಮುಖ್ಯ ಅತಿಥಿಗಳಾಗಗಿ ಶ್ರೀ ವಿ.ವಿ.ವಿ ಹೆಮ್ಮಾಡಿ ಉಪಾಧ್ಯಕ್ಷ ಎಸ್. ರಾಜು ಪೂಜಾರಿ,ಅರ್ಚಕ ತಿರುಮಲೇಶ್ವರ ಭಟ್,ಪತ್ರಕರ್ತ ಅರುಣ ಕುಮಾರ್ ಶಿರೂರು,ಹೆಮ್ಮಾಡಿ ಜನತಾ ಫ್ರೌಢಶಾಲೆಯ ಮುಖ್ಯ ಶಿಕ್ಷಕ ಮಂಜು ಕಾಳಾವರ್,ಬೈಂದೂರು ರೋಟರಿ ಕ್ಲಬ್ ಅಧ್ಯಕ್ಷ ಪ್ರಸಾದ ಪ್ರಭು,ನಿವೃತ್ತ ದೈಹಿಕ ಶಿಕ್ಷಕಿ ಸಾವಿತ್ರಿ,ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷೆ ನಾಗರತ್ನ,ಪೋಷಕ ಪ್ರತಿನಿಧಿಗಳ ಸಂಘದ ಅಧ್ಯಕ್ಷೆ ವಿನಯ,ಶಾಲಾ ವಿದ್ಯಾರ್ಥಿ ನಾಯಕ ಮಂಜುನಾಥ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಕುಸ್ತಿಯಲ್ಲಿ ಚಿನ್ನದ ಪದಕ ಪಡೆದ ಸುರೇಂದ್ರ ಆಚಾರ್ಯ,ಕಬಡ್ಡಿಯಲ್ಲಿ ಸಾಧನೆಗೈದ ನಿಹಾಲ್ ರೋಡಿಗ್ರೆಸ್,ನಿವೃತ್ತ ಶಿಕ್ಷಕ ದಿನಕರ,ಕಲಿಕೆಯನ್ನು ಸಾಧನೆಗೈದ ವಿದ್ಯಾರ್ಥಿಗಳನ್ನು ಹಾಗೂ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸಮ್ಮಾನಿಸಲಾಯಿತು.

ಶಾಲಾ ಮುಖ್ಯ ಶಿಕ್ಷಕ ಆನಂದ್ ಮದ್ದೋಡಿ ಶಾಲಾ ವರದಿ ವಾಚಿಸಿದರು. ಬಿ.ಕೆ ಅರುಣ್ ಸ್ವಸ್ತಿವಾಚನಗೈದರು.ವಿ.ವಿ.ವಿ ಮಂಡಳಿ ನಿರ್ದೇಶಕ ರಘುರಾಮ್ ಕೆ.ಪೂಜಾರಿ ಸ್ವಾಗತಿಸಿದರು.ಶಿಕ್ಷಕ ಪ್ರಕಾಶ್ ಮಾಕೋಡಿ ಕಾರ್ಯಕ್ರಮ ನಿರ್ವಹಿಸಿದರು.ಶಿಕ್ಷಕಿ ಚೈತ್ರ ವಂದಿಸಿದರು.

News/Giri shiruru

pic:Suresh makodi alandoor

Leave a Reply

Your email address will not be published.

seventeen + six =