ಶಿರೂರು; ಸಂಘ ಸಂಸ್ಥೆಗಳು ಉತ್ತಮ ಕಾರ್ಯಗಳನ್ನು ಕೈಗೊಂಡಾಗ ಜನರಿಂದ ಮೆಚ್ಚುಗೆ ದೊರೆಯುತ್ತದೆ.ಊರಿನ ಅಭಿವೃದ್ದಿ ಪ್ರತಿಯೊಬ್ಬರ ಜವಬ್ದಾರಿಯಾಗಿರುತ್ತದೆ.ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ಗ್ರಾಮದ ಅಭಿವೃದ್ದಿ ಸಾಧ್ಯ ಎಂದು ತಾ.ಪಂ ಮಾಜಿ ಸದಸ್ಯ ಪುಷ್ಪರಾಜ್ ಶೆಟ್ಟಿ ಹೇಳಿದರು ಅವರು ಶ್ರೀ ಎರಗೇಶ್ವರ ಕ್ರೀಡಾ ಸಂಘ ಮೇಲ್ಪಂಕ್ತಿ ಶಿರೂರು ಇದರ 22ನೇ ವರ್ಷದ ವಾರ್ಷಿಕೋತ್ಸವ ಸಮಾರಂಭ ಉದ್ಘಾಟಿಸಿ ಈ ಮಾತುಗಳನ್ನಾಡಿದರು.
ಮುಖ್ಯ ಅತಿಥಿಗಳಾಗಿ ಜಿ.ಪಂ ಮಾಜಿ ಸದಸ್ಯ ಸುರೇಶ ಬಟ್ವಾಡಿ,ಶಿರೂರು ಗ್ರಾ.ಪಂ ಅಧ್ಯಕ್ಷೆ ನಾಗರತ್ನ ಆಚಾರ್ಯ,ಗ್ರಾ.ಪಂ ಸದಸ್ಯ ಸುರೇಂದ್ರ ದೇವಾಡಿಗ,ಶಿವರಾಮ ಆಚಾರ್ಯ,ಎರಗೇಶ್ವರ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಶಾಂತಾನಂದ ಆಚಾರ್ಯ,ಗಣೇಶೋತ್ಸವ ಸಮಿತಿ ಅಧ್ಯಕ್ಷ ನಾಗರಾಜ ಜಿ,ನಾಗಪ್ಪಯ್ಯ ಆಚಾರ್ಯ,ಎರಗೇಶ್ವರ ಕ್ರೀಡಾ ಸಂಘದ ಅಧ್ಯಕ್ಷ ಸುಬ್ರಾಯ ಆಚಾರ್ಯ,ಕಾರ್ಯದರ್ಶಿ ಸುಬ್ರಹ್ಮಣ್ಯ ಆಚಾರ್ಯ ಉಪಸ್ಥಿತರಿದ್ದರು.
ಶೇಖರ ಆಚಾರ್ಯ ಸ್ವಾಗತಿಸಿದರು.ಶಿಕ್ಷಕ ಗಣಪತಿ ಹೋಬಳಿದಾರ್ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು.