ಶಿರೂರು: ಕನ್ನಡ ಶಾಲೆಗಳ ಅಭಿವೃದ್ದಿಗೆ ಸರಕಾರದ ಜೊತೆ ಶಿಕ್ಷಣಾಭಿಮಾನಿಗಳ ಸಹಕಾರ ಪ್ರೋತ್ಸಾಹ ಅಗತ್ಯ.ಶಿರೂರು ಮಾದರಿ ಶಾಲೆ ಅತ್ಯುತ್ತಮ ಶೈಕ್ಷಣಿಕ ವಾತಾವರಣ ನೀಡಿರುವ ಜೊತೆಗೆ ಸರಕಾರದ ಮಟ್ಟದಲ್ಲೂ ಗಮನ ಸೆಳೆದಿದೆ.ಉತ್ತಮ ವಿದ್ಯಾರ್ಥಿ ಸಂಖ್ಯೆ ಕೂಡ ಹೊಂದಿದೆ.ಬೈಂದೂರು ಕ್ಷೇತ್ರ ವ್ಯಾಪ್ತಿಯಲ್ಲಿ ಮಾದರಿಯಾಗಿದೆ ಎಂದು ಶಿರೂರು ಗ್ರಾ.ಪಂ ಅಧ್ಯಕ್ಷೆ ನಾಗರತ್ನ ಆಚಾರ್ಯ ಹೇಳಿದರು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಶಿರೂರು ಇದರ 2023ನೇ ಸಾಲಿನ ಶಾಲಾ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಈ ಮಾತುಗಳನ್ನಾಡಿದರು.

ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷ ಎಸ್.ರಘುವೀರ ಶೇಟ್ ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಗ್ರಾ.ಪಂ ಸದಸ್ಯರಾದ ಉಷಾ ಗಾಣಿಗ,ಪ್ರೇಮಾ ಮೊಗೇರ್,ಉದಯ ಪೂಜಾರಿ,ಪ್ರಸನ್ನ ಕುಮಾರ್ ,ಪ್ರಭಾವತಿ,ಪದ್ಮಾವತಿ,ಕ.ರಾ.ಸ.ನೌ.ಸಂಘದ ಅಧ್ಯಕ್ಷ ವಿಶ್ವನಾಥ ಪೂಜಾರಿ,ಶಾಲಾ ಎಸ್.ಡಿ.ಸಿ ಅಧ್ಯಕ್ಷ ಸತೀಶ ಶೆಟ್ಟಿ,ಗಣಪಯ್ಯ ಶೆಟ್ಟಿ,ಬೈಂದೂರು ರೋಟರಿ ಕ್ಲಬ್ ಅಧ್ಯಕ್ಷ ಪ್ರಸಾದ ಪ್ರಭು,ಪತ್ರಕರ್ತ ಅರುಣ್ ಕುಮಾರ್ ಶಿರೂರು,ಆಲಂದೂರು ಶಾಲೆಯ ಮುಖ್ಯ ಶಿಕ್ಷಕ ಮಾಧವ ಬಿಲ್ಲವ, ವಿದ್ಯಾರ್ಥಿ ನಾಯಕ ದರ್ಶನ್,ನಾಯಕಿ ಮೇಹಾ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಇನ್‌ಸ್ಪೆಯರ್ ಆವಾರ್ಡ್ ಪಡೆದ ಓಂಕಾರ ಮೇಸ್ತ,ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಸಾಧನೆಗೈದ ವಿದ್ಯಾರ್ಥಿಗಳನ್ನು ಸಮ್ಮಾನಿಸಲಾಯಿತು ಹಾಗೂ ಶಾಲಾ ವಾರ್ಷಿಕ ಸಂಚಿಕೆಯನ್ನು ಬಿಡುಗಡೆಗೊಳಿಸಲಾಯಿತು.

ಉಡುಪಿ ಉಪವಲಯ ಅರಣ್ಯಾಧಿಕಾರಿಗಳ ಸಂಘದ ಅಧ್ಯಕ್ಷ ನಾಗೇಶ ಬಿಲ್ಲವ ಸ್ವಸ್ತಿವಾಚನಗೈದರು.ಶಾಲಾ ಮುಖ್ಯ ಶಿಕ್ಷಕ ಶಂಕರ ಶಿರೂರು ಸ್ವಾಗತಿಸಿ ಶಾಲಾ ವಾರ್ಷಿಕ ವರದಿ ವಾಚಿಸಿದರು.ಶಿಕ್ಷಕ ಸಿ.ಎನ್.ಬಿಲ್ಲವ ಕಾರ್ಯಕ್ರಮ ನಿರ್ವಹಿಸಿದರು.ಸೋಮರಾಯ ಜನ್ನು ವಂದಿಸಿದರು.

News/Giri shiruru

pic/a.one.studio Shiruru

 

Leave a Reply

Your email address will not be published.

2 × two =