ಶಿರೂರು: ಸರಕಾರಿ ಪದವಿ ಪೂರ್ವ ಕಾಲೇಜು ಶಿರೂರು ಇದರ 2023-24ನೇ ಸಾಲಿನ ಪ್ರತಿಭಾ ಪುರಸ್ಕಾರ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.ಕಾಲೇಜು ಅಭಿವೃದ್ದಿ ಸಮಿತಿ ಉಪಾಧ್ಯಕ್ಷ ಮಂಜುನಾಥ ಪೈ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿದರು.
ಶಿರೂರು ಸ.ಪ.ಪೂ ಕಾಲೇಜಿನ ಪ್ರಾಂಶುಪಾಲೆ ಸುಜಾತ ಭಟ್ ಅಧ್ಯಕ್ಷತೆ ವಹಿಸಿ ಮಾತನಾಡಿ ಮಕ್ಕಳು ಪ್ರತಿಭೆಯ ಜೊತೆಗೆ ವಿವೇಕವಂತರಾಗಿರಬೇಕು.ಅವರನ್ನು ಈ ಸಮಾಜದ ಆಸ್ತಿಯನ್ನಾಗಿ ಮಾಡಬೇಕು.ವಿದ್ಯಾರ್ಥಿಗಳು ತಮ್ಮ ಆಸಕ್ತಿಯ ಕ್ಷೇತ್ರಗಳನ್ನು ಗುರುತಿಸಿಕೊಂಡು ಅದರಲ್ಲಿ ಸಾಧನೆ ಮಾಡಬೇಕು.ವಿದ್ಯಾರ್ಥಿಗಳು ಪೋಷಕರಿಗೆ ಮತ್ತು ಊರಿಗೆ ಕೀರ್ತಿ ತರುವಂತ ಕೆಲಸ ಮಾಡಬೇಕು ಎಂದರು.
ಮುಖ್ಯ ಅತಿಥಿಗಳಾಗಿ ಕಾಲೇಜು ಅಭಿವೃದ್ದಿ ಸಮಿತಿ ಸದಸ್ಯರಾದ ರವೀಂದ್ರ ಶೆಟ್ಟಿ ಹೊಸ್ಮನೆ,ರವೀಂದ್ರ ಶೆಟ್ಟಿ ಹೊನ್ಕೇರಿ,ಅಕ್ಷತಾ ಮೇಸ್ತ,ವಂಡ್ಸೆ ಸ.ಪ.ಪೂ ಕಾಲೇಜಿನ ಪ್ರಾಂಶುಪಾಲ ರಾಜೇಂದ್ರ,ಉಪನ್ಯಾಸಕಿ ನಾಗವೇಣಿ ಪಟಗಾರ್ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಪಿ.ಯು.ಸಿ ಹಾಗೂ ಎಸ್.ಎಸ್.ಎಲ್.ಸಿ ವಿಭಾಗದಲ್ಲಿ ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು ಮತ್ತು ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ಉಪನ್ಯಾಸಕ ದೇವೇಂದ್ರ ಕೆ.ಮೊಗೇರ್ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಉಪನ್ಯಾಸಕಿ ಸುಮೇಯಾ ನಾಜಾ ಬಹುಮಾನ ವಾಚಿಸಿದರು.ಮಂಜುನಾಥ ನಾಯ್ಕ ಕಾರ್ಯಕ್ರಮ ನಿರ್ವಹಿಸಿ.ಉಪನ್ಯಾಸಕಿ ಶ್ರಿದೇವಿ ವಂದಿಸಿದರು.