ಬೈಂದೂರು: ಬೈಂದೂರು ಸ್ಪೋರ್ಟ್ಸ್ ಕ್ಲಬ್(ರಿ.)ಬೈಂದೂರು ಇವರ ಆಶ್ರಯದಲ್ಲಿ 4ನೇ ಬಾರಿಗೆ ರಾಜ್ಯಮಟ್ಟದ 40 ಗಜಗಳ ಹೊನಲು ಬೆಳಕಿನ ಟೆನಿಸ್ ಬಾಲ್ ಕ್ರಿಕೆಟ್ ಪಂದ್ಯಾಟ ಬೈಂದೂರು ಟ್ರೋಪಿ -2024 ಜನವರಿ 13 ಹಾಗೂ 14 ರಂದು ಬೈಂದೂರು ಗಾಂಧಿ ಮೈದಾನದಲ್ಲಿ ನಡೆಯಲಿದೆ.

ಬಂದರು ಹಾಗೂ ಮೀನುಗಾರಿಕಾ ಸಚಿವ ಮಂಕಾಳ್ ಎಸ್.ವೈದ್ಯ ರಾಜ್ಯ ಮಟ್ಟದ ಕ್ರಿಕೆಟ್ ಟ್ರೋಪಿಯನ್ನು ಅನಾವರಣಗೊಳಿಸಲಿದ್ದಾರೆ.

ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಅಧ್ಯಕ್ಷತೆ ವಹಿಸಲಿದ್ದು ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾಟ ಉದ್ಘಾಟಿಸಲಿದ್ದಾರೆ ಹಾಗೂ ಸಮಾರೋಪ ಸಮಾರಂಭ ಕಾರ್ಯಕ್ರಮದಲ್ಲಿ ಶಿವಮೊಗ್ಗ ಲೋಕಸಭಾ ಸಂಸದ ಬಿ.ವೈ ರಾಘವೇಂದ್ರ ಬಹುಮಾನ ವಿತರಣೆ ಮಾಡಲಿದ್ದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅಧ್ಯಕ್ಷತೆ ವಹಿಸಲಿದ್ದು.ಹಿರಿಯರಾದ ಗಿರೀಶ್ ಬೈಂದೂರು ಶುಭಸಂಶನೆಗೈಯಲಿದ್ದಾರ.ಕಾರ್ಯಕ್ರಮದಲ್ಲಿ ಮುಂತಾದ ಅತಿಥಿ  ಗಣ್ಯರು ಆಗಮಿಸಲಿದ್ದಾರೆ ಎಂದು ಸಂಸ್ಥೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

 

 

Leave a Reply

Your email address will not be published. Required fields are marked *

two × five =