ಬೈಂದೂರು:ತಾಲೂಕು ಆಡಳಿತ ಕಛೇರಿ ಬೈಂದೂರು ಇದರ ವತಿಯಿಂದ 75ನೇ ಗಣರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮ ಬೈಂದೂರು ಗಾಂಧಿ ಮೈದಾನದಲ್ಲಿ ಆಚರಿಸಲಾಯಿತು.
ಬೈಂದೂರು ತಹಶೀಲ್ದಾರ ಪ್ರದೀಪ್ ಆರ್ ದ್ವಜಾರೋಹಣ ನೆರವೇರಿಸಿ ಬಳಿಕ ಸಂವಿದಾನ ಶಿಲ್ಪಿ ಡಾ| ಬಿ.ಆರ್ ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.
ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅಧ್ಯಕ್ಷತೆ ವಹಿಸಿ ಮಾತನಾಡಿ ದೇಶದ ಸಂವಿಧಾನ ಹಾಗೂ ಕಾನೂನುಗಳಿಗೆ ಪ್ರತಿಯೊಬ್ಬರು ಗೌರವ ನೀಡುವ ಮೂಲಕ ದೇಶದ ಘನತೆಯನ್ನು ಹೆಚ್ಚಿಸಬೇಕು.ಗಣರಾಜ್ಯೋತ್ಸವ ದೇಶದ ಐಕ್ಯತೆಯನ್ನು ಸಾರಬೇಕು.ನಮ್ಮ ದೇಶ ಹಲವು ಭಾಷಾ ಸಂಸ್ಕ್ರತಿಯ ತವರೂರಾಗಿದೆ.ಈ ದೇಶದ ಸಂವಿಧಾನ ಜಾಗತಿಕ ಮಟ್ಟದಲ್ಲಿ ಗೌರವ ಪಡೆದುಕೊಂಡ ಹೆಗ್ಗಳಿಕೆ ಹೊಂದಿದ್ದು.ಪರಸ್ಪರ ಐಕ್ಯತೆ ಮೂಲಕ ಭವ್ಯ ಭಾರತ ನಿರ್ಮಿಸಲು ಪ್ರತಿಯೊಬ್ಬರು ಕಟಿಬದ್ದರಾಗಬೇಕಾಗಿದೆ ಎಂದರು.
ಮುಖ್ಯ ಅತಿಥಿಗಳಾಗಿ ತಾ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭಾರತಿ,ಬೈಂದೂರು ಠಾಣೆಯ ವೃತ್ತ ನಿರೀಕ್ಷಕ ಸವಿತ್ರ ತೇಜ್ ,ಬೈಂದೂರು ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಜಿ.ಸೂರ್ಯಕಾಂತ ಖಾರ್ವಿ,ಬೈಂದೂರು ಆರಕ್ಷಕ ಇಲಾಖೆಯ ಮಹೇಶ ಕಂಬಿ,ಉಪ ತಹಶೀಲ್ದಾರ ಭೀಮಪ್ಪ ಬಿಲ್ಲಾರ್, ಗ್ರಾಮ ಲೆಕ್ಕಾಧಿಕಾರಿಗಳು,ಶಿಕ್ಷಣ ಇಲಾಖೆಯ ಅಧಿಕಾರಿಗಳೂ,ಪೊಲೀಸ್ ಇಲಾಖೆಯ ಸಿಬಂದಿಗಳು ಹಾಗೂ ಕಂದಾಯ ಇಲಾಖೆಯ ಸಿಬಂದಿಗಳು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ನಿವೃತ್ತ ಸೈನಿಕ ಜಾನ್ಸಿ ಥೋಮಸ್,ಕ್ರೀಡಾ ಕ್ಷೇತ್ರದಲ್ಲಿ ಸಾಧನೆಗೈ ರಿತೇಶ್ ಕೆ,ಸಿಂಚನಾ ಶೆಟ್ಟಿ,ನಿರೀಕ್ಷಾ ಪೂಜಾರಿ ಹಾಗೂ ಪ್ರಜ್ಞಾ ರಾವ್ ರವರನ್ನು ಸಮ್ಮಾನಿಸಲಾಯಿತು.ಕಾರ್ಮಿಕ ಇಲಾಖೆಯಿಂದ ಕಾರ್ಮಿಕರ ಮಕ್ಕಳಿಗೆ ಲ್ಯಾಪ್‌ಟಾಪ್ ವಿತರಿಸಲಾಯಿತು.ಹಾಗೂ ಬೈಂದೂರು ಆರಕ್ಷಕ ಠಾಣೆಯ ಸಿಬಂದಿಗಳ ನೇತ್ರತ್ವದಲ್ಲಿ ಪಧ ಸಂಚಲನ ನಡೆಯಿತು.
ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ ನಾಯ್ಕ ಸ್ವಾಗತಿಸಿದರು.ಬೈಂದೂರು ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಚಂದ್ರಶೇಖರ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.ಶಿಕ್ಷಕ ಗಣಪತಿ ಹೋಬಳಿದಾರ್ ವಂದಿಸಿದರು.
News/Giri shiruru
pic:G.D.K UPPUNDA