ಶಿರೂರು: ಸಮುದಾಯ,ಸಂಘಟನೆಗಳು ಶೈಕ್ಷಣಿಕ,ಸಾಮಾಜಿಕ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಮುತುವರ್ಜಿ ವಹಿಸಿ ಸಮಾಜದ ಆಶಕ್ತರ ಧ್ವನಿಯಾದಾಗ ಬಡ ಕುಟುಂಬಗಳು ಮುಖ್ಯವಾಹಿನಿಯಲ್ಲಿ ಗುರುತಿಸಲು ಸಾದ್ಯ.ಸಮಾಜಮುಖಿ ಕಾರ್ಯಕ್ರಮದ ಮೂಲಕ ಸಂಘಟಿತರಾದಾಗ ಸಮುದಾಯಕ್ಕೆ ಶಕ್ತಿ ದೊರೆಯುತ್ತದೆ.ಶಿರೂರು ಬಂಟರ ಸಂಘ ನಿರಂತರ ಇಂತಹ ಸಾಮಾಜಿಕ ಕಾರ್ಯಕ್ರಮದಲ್ಲಿ ಗುರುತಿಸಿಕೊಂಡಿರುವುದು ಸಮುದಾಯದ ಹೆಮ್ಮೆ ಎಂದು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಹೇಳಿದರು ಅವರು ಬಂಟರಯಾನೆ ನಾಡವರ ಸಂಘ ಮತ್ತು ಯುವ ಬಂಟರ ಸಂಘ ಶಿರೂರು,ಬೆಂಗಳೂರು ಬಂಟರ ಸಂಘ,ಜಾಗತಿಕ ಬಂಟರ ಸಂಘ ಮಂಗಳೂರು ಇದರ ಸಹಯೋಗದೊಂದಿಗೆ ಶಿರೂರು ದಾಸನಾಡಿ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ನಡೆದ ಪ್ರತಿಭಾ ಪುರಸ್ಕಾರ ಹಾಗೂ ವಿದ್ಯಾರ್ಥಿವೇತನ ವಿತರಿಸಿ ಈ ಮಾತುಗಳನ್ನಾಡಿದರು.
ಶಿರೂರು ಬಂಟರ ಸಂಘದ ಅಧ್ಯಕ್ಷ ಶ್ರೀನಿವಾಸ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಬೆಂಗಳೂರು ಬಂಟರ ಸಂಘದ ಗೌರವ ಕಾರ್ಯದರ್ಶಿ ಆನಂದರಾಮ ಶೆಟ್ಟಿ,ಬೈಂದೂರು ಬಂಟರಯಾನೆ ನಾಡವರ ಸಂಘದ ಅಧ್ಯಕ್ಷ ಎಚ್.ವಸಂತ ಹೆಗ್ಡೆ,ನಿವೃತ್ತ ಜೀವವಿಮಾ ಅಧಿಕಾರಿ ಡಾ.ಎಸ್. ಶ್ರೀನಿವಾಸ ಶೆಟ್ಟಿ,ಶಿರೂರು ಯುವ ಬಂಟರ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಶಾಸಕ ಗುರುರಾಜ್ ಗಂಟಿಹೊಳೆ,ಎಸ್.ಎಸ್.ಎಲ್.ಸಿ ವಿಭಾಗದಲ್ಲಿ ಸಾಧನೆಗೈದ ಪ್ರಸ್ತುತಿ ಶೆಟ್ಟಿ,ಸಿ.ಎ ಪ್ರಗತಿ ಶೆಟ್ಟಿ ಯವರನ್ನು ಸಮ್ಮಾನಿಸಲಾಯಿತು ಹಾಗೂ ಬಂಟ ಸಮಯುದಾಯದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಿಸಲಾಯಿತು.
ಕೋಶಾಧಿಕಾರಿ ಅರುಣ್ ಕುಮಾರ್ ಶೆಟ್ಟಿ ಸಂಘದ ವರದಿ ವಾಚಿಸಿದರು.ಎಚ್.ಚಂದ್ರಶೇಖರ ಶೆಟ್ಟಿ ಸ್ವಾಗತಿಸಿದರು.ಪುಷ್ಪರಾಜ್ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.ದೀಪಾ ಶೆಟ್ಟಿ ವಂದಿಸಿದರು.
News/Giri shiruru