ಶಿರೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮೇಲ್ಪಂಕ್ತಿ (ಪೇಟೆ)ಶಿರೂರು ಇದರ ಮಕ್ಕಳ ಸಾಂಸ್ಕ್ರತಿಕ ಕಲರವ -2024 ಕಾರ್ಯಕ್ರಮ ಶಾಲಾ ಸಭಾಭವನದಲ್ಲಿ ನಡೆಯಿತು.
ಶಿರೂರು ಗ್ರಾ.ಪಂ ಅಧ್ಯಕ್ಷೆ ನಾಗರತ್ನ ಆಚಾರ್ಯ ಮಕ್ಕಳ ಸಾಂಸ್ಕ್ರತಿಕ ಕಲರವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ವಿದ್ಯಾರ್ಥಿಗಳು ಭವಿಷ್ಯದ ಹಿತದೃಷ್ಟಿಯಿಂದ ಬದಲಾಗುತ್ತಿರುವ ವ್ಯವಸ್ಥೆಯಲ್ಲಿ ಶಿಕ್ಷಣದ ಜೊತೆಗೆ ಸಂಸ್ಕ್ರತಿ ಸಂಸ್ಕಾರಗಳನ್ನು ವಿದ್ಯಾರ್ಥಿಗಳಿಗೆ ತಿಳಿಸುವ ಜವಬ್ದಾರಿ ಪಾಲಕರು ಮತ್ತು ಶಿಕ್ಷಕರದ್ದಾಗಿದೆ.ಒಂದು ಶಾಲೆಯ ಅಭಿವ್ರದ್ದಿ ಯಲ್ಲಿ ಅಲ್ಲಿನ ಶಿಕ್ಷಕರ ಪಾತ್ರ ಬಹುಮುಖ್ಯವಾಗಿದೆ ಎಂದರು.
ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷೆ ಜ್ಯೋತಿ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಬೈಂದೂರು ಶಾಸಕ ಗುರುರಾಜ ಶೆಟ್ಟಿ ಗಂಟಿಹೊಳೆ,ಗ್ರಾ.ಪಂ ಉಪಾಧ್ಯಕ್ಷ ಕಾಪ್ಸಿ ನೂರ್‌ಮಹ್ಮದ್,ತಾ.ಪಂ ಮಾಜಿ ಸದಸ್ಯ ಪುಷ್ಪರಾಜ್ ಶೆಟ್ಟಿ,ಗ್ರಾ.ಪಂ ಸದಸ್ಯರಾದ ರವೀಂದ್ರ ಶೆಟ್ಟಿ ಆರ್‍ಮಕ್ಕಿ,ಶಕೀಲ್ ಅಹ್ಮದ್,ಫರೀದಾ ಬೇಗಂ,ಆಕ್ರಮ -ಸಕ್ರಮ ಸಮಿತಿ ಸದಸ್ಯ ದಿನೇಶ್ ಕುಮಾರ್,ಶಿರೂರಿನ ಹಿರಿಯ ವೈದ್ಯರಾದ ಕೆ.ಪಿ ನಂಬಿಯಾರ್,ರಾಜ್ಯ ಸಮನ್ವಯ ವೇದಿಕೆ ಅಧ್ಯಕ್ಷ ಉಮೇಶ ಗಂಗೆವಾಡಿ,ಹರಿಶ್ಚಂದ್ರ ಆಚಾರ್ಯ,ಸಮನ್ವಯ ವೇದಿಕೆ ಸದಸ್ಯ ಹರೀಶ್,ಶಿಕ್ಷಣ ಇಲಾಖೆಯ ಚಂದ್ರ,ತಾಯಂದಿರ ಸಮಿತಿ ಉಪಾಧ್ಯಕ್ಷೆ ಜಯಲಕ್ಷ್ಮೀ,ಮಹಾದೇವ ಬಾಕಡ,ರಮೇಶ ಶಿರೂರು,ಅಶೋಕ ಶೆಟ್ಟಿ ಕಾರಿಕಟ್ಟೆ,ಶಾಲಾ ನಾಯಕ ಅಭಿಷೇಕ್ ಉಪಸ್ಥಿತರಿದ್ದರು.
ಶಾಲಾ ಪ್ರಭಾರ ಮುಖ್ಯ ಶಿಕ್ಷಕಿ ಸರಸ್ವತಿ ಪ್ರಾಸ್ತಾವಿಕ ಮಾತುಗಳನ್ನಾಡಿದರು.ಶಿಕ್ಷಕಿ ಯಶೋಧಾ ಸ್ವಾಗತಿಸಿದರು.ಶಿಕ್ಷಕಿ ವಿದ್ಯಾ ಕಾರ್ಯಕ್ರಮ ನಿರ್ವಹಿಸಿದರು.
News/pic:Giri Shiruru