ಬೈಂದೂರು: ಬೈಂದೂರು ಕ್ಷೇತ್ರದ ಬಿಜೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು  ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ಉಪ್ಪುಂದ ವತಿಯಿಂದ ದತ್ತು ಸ್ವೀಕಾರ ಕಾರ್ಯಕ್ರಮ ಮಾರ್ಚ್ 05 ರಂದು ಸಂಜೆ 6 ಗಂಟೆಗೆ ಬಿಜೂರು ಶಾಲಾ ಆವರಣದಲ್ಲಿ ದತ್ತು ಸ್ವೀಕಾರ ಸಮಾರಂಭ ಮತ್ತು ಸಾಂಸ್ಕ್ರತಿಕ ಉತ್ಸವ ನಡೆಯಲಿದೆ ಎಂದು ಮ್ಯಾನೆಜಿಂಗ್ ಟ್ರಸ್ಟಿ ಡಾ.ಗೋವಿಂದ ಪೂಜಾರಿ ಹೇಳಿದರು ಅವರು ಬೈಂದೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿ 10 ವರ್ಷಗಳಿಂದ ಸಮಾಜ ಸೇವಾ ಕ್ಷೇತ್ರದಲ್ಲಿ ನಿರಂತರವಾಗಿ ತೊಡಗಿಸಿಕೊಂಡು ಶೈಕ್ಷಣಿಕ, ಧಾರ್ಮಿಕ, ಸಾಂಸ್ಕೃತಿಕ, ಕ್ರೀಡಾಕ್ಷೇತ್ರಗಳಿಗೆ ತನ್ನದೇ ಆದ ಸಹಾಯ- ಸಹಕಾರ ನೀಡುತ್ತಿದ್ದು ಶ್ರೀವರಲಕ್ಷ್ಮಿ ಚಾರಿಟೇಬಲ್ ಟ್ರಸ್ಟ್ ಆರಂಭಿಸಿ ಸಮಾಜದ ಬಡ ಅರ್ಹ ವಿದ್ಯಾರ್ಥಿಗಳು, ನಿರಾಶ್ರಿತರು, ವೃದ್ಧರು, ವಿಕಲಚೇತನರ ಕಷ್ಟಗಳಿಗೆ ಆರ್ಥಿಕ ಸಹಕಾರವನ್ನು ನೀಡಲಾಗುತ್ತಿದೆ.ನಾನು ಕಲಿತ ಸರಕಾರಿ ಶಾಲೆಯನ್ನು ಉಳಿಸಿಕೊಳ್ಳಲು ನಮ್ಮೂರಿನ ಎಲ್ಲರ ಜೊತೆಗೂಡಿ ನಮ್ಮೂರ ಶಾಲೆಯನ್ನು ಮಾದರಿ ಶಾಲೆಯನ್ನಾಗಿ ರೂಪಿಸುವ ಉದ್ದೇಶ ಹೊಂದಿದ್ದು, ಉಪ್ಪುಂದ ಶ್ರೀ ವರಲಕ್ಷ್ಮಿ ಚಾರಿಟೇಬಲ್ ಟ್ರಸ್ಟ್ ಮೂಲಕ ದತ್ತು ತಗೆದುಕೊಂಡು ವಿದ್ಯಾರ್ಥಿಗಳಿಗೆ ಉತ್ತಮ ಸೌಲಭ್ಯ, ಮೂಲ ಸೌಕರ್ಯ ಒಳಗೊಂಡಂತೆ ಗುಣಮಟ್ಟದ ಶಿಕ್ಷಣ ನೀಡಲು ಚಿಂತನೆ ನಡೆಸಲಾಗಿದೆ. ಪ್ರಾರಂಭದಲ್ಲಿ ಹೊಸ ವಾಹನ ಖರೀದಿ, ಹೊಸ ಅತಿಥಿ ಶಿಕ್ಷಕರ ನೇಮಕಾತಿ ಮಾಡುವುದು, ಎಲ್ ಕೆಜಿ, ಯುಕೆಜಿ ತರಗತಿ ಆರಂಭಿಸುವುದು, ಕಂಪ್ಯೂಟರ್ ಶಿಕ್ಷಣ ನೀಡುವುದು, ಮಕ್ಕಳಿಗೆ ಸಂಗೀತ, ಭರತ ನಾಟ್ಯ, ಯಕ್ಷಗಾನ, ನಾಟಕ, ಡ್ರಾಯಿಂಗ್ ಕಲಿಕೆಗೆ ಆದ್ಯತೆ ನೀಡಲಾಗುವುದು. ವಿದ್ಯಾರ್ಥಿಗಳ ನೆನಪಿನ ಶಕ್ತಿ ಹೆಚ್ಚಿಸಲು ಏಕಾಗ್ರತೆಗಾಗಿ ಧ್ಯಾನ, ಆರೋಗ್ಯಕ್ಕಾಗಿ ಯೋಗ ತರಬೇತಿ ನೀಡುವುದು, ಅಧ್ಯಯನ ಕೇಂದ್ರ(ಲೈಬ್ರರಿ), ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧಾ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುವುದು ಸೇರಿದಂತೆ ಶಾಲೆಗೆ ಸರಕಾರದ ಸೌಲಭ್ಯಗಳನ್ನು ದೊರಕಿಸಿ ಕೊಡಲು ಪ್ರಯತ್ನಿಸುವುದು, ಸುಸಜ್ಜಿತ ಕ್ರೀಡಾಂಗಣ ನಿರ್ಮಾಣ, ಶಿಕ್ಷಕರಿಗೆ ಸೂಕ್ತ ತರಬೇತುದಾರರಿಂದ ಮಾರ್ಗದರ್ಶನ ನೀಡುವುದು ಒಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ಸಂಸ್ಕಾರಯುತ, ಕೌಶಲ್ಯಯುತ, ಮೌಲ್ಯ ಶಿಕ್ಷಣ ಒದಗಿಸುವ ನಿಟ್ಟಿನಲ್ಲಿ ಉತ್ತಮ ಚಿಂತನೆ ನಡೆಸಿ ಯೋಜನೆ ರೂಪಿಸಲಾಗಿದೆ ಎಂದರು.

ಸಭಾ ಕಾರ್ಯಕ್ರಮದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅಧ್ಯಕ್ಷತೆ ವಹಿಸಲಿದ್ದು.ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ಶುಭಸಂಸನೆಗೈಯಲಿದ್ದಾರೆ.ಶಿವಮೊಗ್ಗ ಲೋಕಸಭಾ ಸಂಸದ ಬಿ.ವೈ ರಾಘವೇಂದ್ರ ಆಶಯ ನುಡಿಗಳನ್ನಾಡಲಿದ್ದಾರೆ. ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಡಾ.ಗೋವಿಂದ ಬಾಬು ಪೂಜಾರಿ ಶಾಲೆಯನ್ನು ದತ್ತು ಸ್ವೀಕರಿಸಲಿದ್ದಾರೆ ಹಾಗೂ ಮುಂತಾದ ಗಣ್ಯರು ಉಪಸ್ಥಿತರಿರಲಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಉತ್ಸವ ಸಮಿತಿ ಸಂಯೋಜಕ ಶ್ರೀಧರ ಬಿಜೂರು,ನಾಗರಾಜ ಪಿ.ಯಡ್ತರೆ,ಮುಖ್ಯ ಶಿಕ್ಷಕ ಮಂಜುನಾಥ ಎಸ್,ಪ್ರಚಾರ ಸಮಿತಿ ಸಂಚಾಲಕ ತಿಮ್ಮಪ್ಪ ದೇವಾಡಿಗ ಹಾಜರಿದ್ದರು.

ವರದಿ/ಚಿತ್ರ: ಗಿರಿ ಶಿರೂರು

 

Leave a Reply

Your email address will not be published. Required fields are marked *

four + one =