ಬೈಂದೂರು: ಜಿಲ್ಲೆಯ ವಿವಿಧ ದಲಿತ ಸಂಘಟನೆ ಇದರ ವತಿಯಿಂದ ದಲಿತರಿಗೆ ಮೀಸಲಿಟ್ಟ ಡಿಸಿ ಮನ್ನಾಭೂಮಿಯನ್ನು ದಲಿತರಿಗೆ ನೀಡಬೇಕೆಂದು ಆಗ್ರಹಿಸಿ ಬೈಂದೂರು ತಾಲೂಕು ಕಚೇರಿ ಎದುರು ನಡೆಯುತ್ತಿರುವ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಉಡುಪಿ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ಬೇಟಿ ನೀಡಿದರು.

ದಲಿತ ಸಂಘಟನೆ ವತಿಯಿಂದ ಮನವಿ ಸ್ವೀಕರಿಸಿ ಮಾತನಾಡಿ ಈಗಾಗಲೇ ಉಡುಪಿ ಜಿಲ್ಲೆಯಲ್ಲಿ ದಲಿತರ ರಕ್ಷಣೆ ಮತ್ತು ಸರಕಾರದ ಯೋಜನೆಗಳನ್ನು ಸಮರ್ಪಕವಾಗಿ ದೊರಕಿಸಿ ಕೊಡಲಾಗುತ್ತಿದೆ.ಬೈಂದೂರು ಹಾಗೂ ಶಿರೂರು ಮುಂತಾದ ಕಡೆ ದಲಿತರಿಗೆ ಮೀಸಲಿಟ್ಟ ಭೂಮಿಗೆ ಬದಲಾಗಿ ಪ್ರತ್ಯೇಕ ಸ್ಥಳ ನೀಡಬೇಕೆಂಬ ಬೇಡಿಕೆಗೆ ಇಲಾಖೆಗಳೊಂದಿಗೆ ಚರ್ಚಿಸಿ ಒದಗಿಸಿಕೊಡುವುದಾಗಿ ಭರವಸೆ ನೀಡಿದರು.ಜಿಲ್ಲಾಧಿಕಾರಿಗಳ ಬೇಟಿಯ ಬಳಿಕ ಉಪವಾಸ ಸತ್ಯಾಗ್ರಹ ಹಿಂತೆಗೆದುಕೊಂಡಿದ್ದೇವೆ ಎಂದು ದಲಿತ ಸಂಘಟನೆಯ ಮುಖಂಡರು ತಿಳಿಸಿದ್ದಾರೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ.,ತಾಲೂಕು ಆರೋಗ್ಯಾಧಿಕಾರಿ ಡಾ.ಪ್ರೇಮಾನಂದ್,ಬೈಂದೂರು ತಹಶೀಲ್ದಾರ ಪ್ರದೀಪ್ ಆರ್,ದಲಿತ ಮುಖಂಡ ರಾಘವೇಂದ್ರ ಶಿರೂರು,ಮಾಧವ ಬಾಕಡ,ರಮೇಶ ಶಿರೂರು,ರಾಮ ಎಮ್.ಮಯ್ಯಾಡಿ,ಮಹಾಲಕ್ಷ್ಮೀ ಬೈಂದೂರು,ಈಶ್ವರ ಶಿರೂರು,ವಾಸುದೇವ ಶಿರೂರು ಮೊದಲಾದವರು ಹಾಜರಿದ್ದರು.

Leave a Reply

Your email address will not be published.

12 − eleven =