ಶಿರೂರು; ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಶಿರೂರು ಇದರ ನೂತನ ವಿವೇಕ ಕೊಠಡಿಯನ್ನು ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು ಶಾಲಾಭಿಮಾನಿಗಳ ಸಹಕಾರದಿಂದ ಇಂದು ಅನೇಕ ಸರಕಾರಿ ಶಾಲೆಗಳು ಖಾಸಗಿ ಶಾಲೆಗಳನ್ನು ಮೀರಿ ಬೆಳೆದಿದೆ.ಪ್ರತಿ ಮಗುವಿಗೂ ಗುಣಮಟ್ಟದ ಶಿಕ್ಷಣ ಸಿಗಬೇಕು. ಮಾನವನ ಬದುಕನ್ನು ಹಸನಾಗಿಸಲು ಶಿಕ್ಷಣ ಅತ್ಯಗತ್ಯ. ಮುಗ್ಧ ಮಕ್ಕಳಲ್ಲಿ ಸುಪ್ತವಾಗಿರುವ ಪ್ರತಿಭೆಯನ್ನು ಹೊರ ಹೊಮ್ಮಿಸಿ,ಮಕ್ಕಳು ಸರ್ವತೋಮುಖವಾಗಿ ಬೆಳವಣಿಗೆ ಹೊಂದಲು ಪಾಲಕರು,ಶಿಕ್ಷಕರು,ಸಮುದಾಯದ ಪಾತ್ರ ಹಿರಿದಾಗಿದೆ.ಶೈಕ್ಷಣಿಕ ವ್ಯವಸ್ಥೆಯಲ್ಲಿ ಕನ್ನಡ ಮಾಧ್ಯಮ ಶಾಲೆಗಳ ಅಭಿವೃದ್ದಿಯಾದಾಗ ಉತ್ತಮ ಶೈಕ್ಷಣಿಕ ವಾತಾವರಣ ನಿರ್ಮಾಣ ಸಾಧ್ಯ ಎಂದರು.

ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ ನಾಯ್ಕ,ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷ ರಘುವೀರ ಶೇಟ್, ಗ್ರಾ.ಪಂ ಸದಸ್ಯರಾದ ಉದಯ ಪೂಜಾರಿ,ಪ್ರಸನ್ನ ಕುಮಾರ್ ಶೆಟ್ಟಿ,ರವೀಂದ್ರ ಶೆಟ್ಟಿ ಆರ್‍ಮಕ್ಕಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ರವೀಂದ್ರ ಶೆಟ್ಟಿ ಹೊಸ್ಮನೆ,ಅಶೋಕ ಶೆಟ್ಟಿ ಕಾರಿಕಟ್ಟೆ,ಸತೀಶ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.

ಶಾಲಾ ಮುಖ್ಯ ಶಿಕ್ಷಕ ಶಂಕರ ಶಿರೂರು ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು.ಶಿಕ್ಷಕ ಸಿ.ಎನ್.ಬಿಲ್ಲವ ಕಾರ್ಯಕ್ರಮ ನಿರ್ವಹಿಸಿದರು.ಸೋಮರಾಯ ಜನ್ನು ವಂದಿಸಿದರು.

News/Giri shiruru

pic: a.one.studio shiruru

 

Leave a Reply

Your email address will not be published.

9 + 8 =