ಬೈಂದೂರು: ಭಾರತೀಯ ಜನತಾ ಪಾರ್ಟಿ ಬೈಂದೂರು ಮಂಡಲ ಇದರ ಬೈಂದೂರು ಬಿಜೆಪಿ ಮಂಡಲದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಹೋಟೆಲ್ ಪರಿಚಯ ದೇವಕಿ ಸಭಾಂಗಣ ನಂದನವನ ಉಪ್ಪುಂದದಲ್ಲಿ ನಡೆಯಿತು.
ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ಪದಗ್ರಹಣ ಸಮಾರಂಭ ನೆರವೇರಿಸಿ ಮಾತನಾಡಿ ರಾಜಕೀಯದಲ್ಲಿ ಅಧಿಕಾರದ ಆಸೆ,ಕುಟುಂಬದ ಮಮತೆ ಹಾಗೂ ಸ್ವಾರ್ಥ ಚಿಂತನೆ ಸಹಜವಾಗಿದ್ದರು ಕೂಡ ಹಗಲಿರುಳು ದೇಶದ ಹಿತ ಕಾಯುವುದು ತನ್ನ ಜವಬ್ದಾರಿ ಎಂದು ಅರಿತು.ನಿಶ್ವಾರ್ಥ ಸೇವೆ ನೀಡುವ ಈ ದೇಶದ ಪ್ರಧಾನಿ ನರೇಂದ್ರ ಮೋದಿಜೀಯವರ ಬಗ್ಗೆ ಇಡಿ ಜಗತ್ತೆ ಕೊಂಡಾಡುತ್ತದೆ.ಇವರು ಪ್ರಧಾನಿಯಾದ ಬಳಿಕ ಭಾರತದಲ್ಲಾದ ಕ್ರಾಂತಿಕಾರಿ ಬದಲಾವಣೆಗಳು ಜಾಗತಿಕ ಮಟ್ಟದಲ್ಲಿ ಈ ದೇಶವನ್ನು ಇನ್ನಷ್ಟು ಸದೃಡಗೊಳಿಸಿದೆ.ಬಿಜೆಪಿಯ ಪ್ರತಿಯೊಬ್ಬ ಕಾರ್ಯಕರ್ತರು ಸ್ವಾರ್ಥ ಚಿಂತನೆಯಿಲ್ಲದೆ ದೇಶದ ಬಗ್ಗೆ ಅಪಾರ ಗೌರವ ಉಳ್ಳವರಾಗಿದ್ದಾರೆ.ಹಿಂದೂತ್ವ ಮತ್ತು ದೇಶದ ಅಭಿವೃದ್ದಿ ದೃಷ್ಟಿಯಿಂದ ನರೇಂದ್ರ ಮೋದಿಯವರು ಮತ್ತೊಮ್ಮೆ ಈ ದೇಶದ ಪ್ರಧಾನಿಯಾಗಬೇಕಾಗಿದೆ.ಹೀಗಾಗಿ ಪ್ರತಿಯೊಬ್ಬ ಕಾರ್ಯಕರ್ತರು ಪ್ರಾಮಾಣಿಕ ಸೇವೆ ಸಲ್ಲಿಸುವ ಮೂಲಕ ನರೇಂದ್ರ ಮೋದಿಯವರಿಗೆ ಇನ್ನಷ್ಟು ಶಕ್ತಿ ನೀಡಬೇಕಾಗಿದೆ ಎಂದರು
ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಒಬ್ಬ ಸಾಮಾನ್ಯ ಕಾರ್ಯಕರ್ತರು ಕೂಡ ಶಾಸಕನಾಗಿ,ಸಂಸದನಾಗಿ,ಸಚಿವನಾಗಿ ,ಪ್ರಧಾನಿಯಾಗುವವರೆಗೆ ಅವಕಾಶ ನೀಡುವ ಏಕೈಕ ಪಕ್ಷ ಬಿಜೆಪಿಯಾಗಿದೆ.ಜವಬ್ದಾರಿ ಹುದ್ದೆ ಪಡೆದಿರುವ ಕಾರ್ಯಕರ್ತರಿಗೆ ಸರಿಸಮಾನವಾಗಿ ನಿಶ್ವಾರ್ಥ ಸೇವೆ ನೀಡುವ ಸಾಮಾನ್ಯ ಕಾರ್ಯಕರ್ತನನ್ನು ಕೂಡ ಪಕ್ಷದ ಆಸ್ತಿಯಾಗಿಸಿದೆ.ಸಣ್ಣ ಪುಟ್ಟ ಲೋಪ ದೋಷಗಳು ಸಹಜ.ಆದರೆ ಚುನಾವಣೆ ಬಂದಾಗ ಸಂಘಟಿತ ಹೋರಾಟದ ಮೂಲಕ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಬೇಕಾಗಿರುವುದು ನಮ್ಮೆಲ್ಲರ ಜವಬ್ದಾರಿಯಾಗಿದೆ ಎಂದರು.
ವೇದಿಕೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಸದಾನಂದ ಉಪ್ಪಿನಕುದ್ರು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರಿಯದರ್ಶಿನಿ ಬೆಸ್ಕೂರು, ಜಿಲ್ಲಾ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಬಿಲ್ಲಾಡಿ ಪ್ರಥ್ವಿರಾಜ್ ಶೆಟ್ಟಿ, ಬೈಂದೂರು ಬಿಜೆಪಿ ಮಂಡಲ ಯುವ ಮೋರ್ಚಾ ಅಧ್ಯಕ್ಷ ಗಜೇಂದ್ರ ಎಸ್ ಬೇಲೆಮನೆ, ಮಹಿಳಾ ಮೋರ್ಚಾ ಅಧ್ಯಕ್ಷೆ ಶ್ಯಾಮಲಾ ಕುಂದರ್, ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷ ಶಿವರಾಜ್ ಪೂಜಾರಿ ಗೋಳಿಹೊಳೆ, ರೈತ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪುಷ್ಪರಾಜ್ ಶೆಟ್ಟಿ ಶಿರೂರು, ಅಲ್ಪಸಂಖ್ಯಾತರ ಮೋರ್ಚಾ ಅಧ್ಯಕ್ಷ ಅಂಥೋನಿ ಡಿ’ಸೋಜಾ ತ್ರಾಸಿ, ಎಸ್ಸಿ ಮೋರ್ಚಾದ ಅಧ್ಯಕ್ಷ ಅಶೋಕ್ ಎನ್.ಡಿ ಗಂಗೊಳ್ಳಿ, ಎಸ್.ಟಿ ಮೋರ್ಚಾ ಅಧ್ಯಕ್ಷ ರಾಮ ನಾಯ್ಕ್, ರೈತ ಮೋರ್ಚಾ ಅಧ್ಯಕ್ಷ ಪ್ರಕಾಶ್ಚಂದ್ರ ಶೆಟ್ಟಿ ಕಾವ್ರಾಡಿ ಉಪಸ್ಥಿತರಿದ್ದರು.
ಬೈಂದೂರು ಬಿಜೆಪಿ ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಪ್ರಾಸ್ತಾವಿಕ ಮಾತುಗಳನ್ನಾಡಿದರು.
ಬಿಜೆಪಿ ಮಂಡಲದ ಪ್ರಧಾನ ಕಾರ್ಯದರ್ಶಿ ಮಹೇಂದ್ರ ಪೂಜಾರಿ ಸ್ವಾಗತಿಸಿದರು. ಮಂಡಲದ ಪ್ರಧಾನ ಕಾರ್ಯದರ್ಶಿ ಉಮೇಶ್ ಶೆಟ್ಟಿ ಕಲ್ಗದ್ದೆ ಕಾರ್ಯಕ್ರಮ ನಿರ್ವಹಿಸಿದರು. ಬಿಜೆಪಿ ಮಂಡಲದ ಉಪಾಧ್ಯಕ್ಷ ರಾಘವೇಂದ್ರ ನೆಂಪು ವಂದಿಸಿದರು.
ವರದಿ/ಚಿತ್ರ: ಗಿರಿ ಶಿರೂರು