ಶಿರೂರು: ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಯಾಗಿದೆ.ಚುನಾವಣೆ ಅಕ್ರಮಗಳ ನಿಗ್ರಹಕ್ಕಾಗಿ ಪೊಲೀಸ್ ಇಲಾಖೆ ಸನ್ನದ್ದವಾಗಿದೆ. ಚುನಾವಣೆ ಇಲಾಖೆ ವಿವಿಧ ತಂಡ ರಚಿಸಿ ಪ್ರತ್ಯೇಖ ಜವಬ್ದಾರಿ ನೀಡಿದೆ.ಮುಖ್ಯವಾಗಿ ಶಿರೂರು ಗಡಿಭಾಗದಲ್ಲಿ ವಾಹನ ತಪಾಸಣೆ ಆರಂಭಗೊಂಡಿದೆ. ವಿವಿಧ ಇಲಾಖೆ ಅಧಿಕಾರಿಗಳನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿದೆ.ಜಿಲ್ಲೆಗೆ ಪ್ರವೇಶಿಸುವ ಪ್ರತಿ ವಾಹನಗಳ ವಿವರ ದಾಖಲಿಸಿ ತಪಾಸಣೆ ನಡೆಸಲಾಗುತ್ತಿದೆ.ಇದರ ಜೊತೆಗೆ ವಿವಿಧ ಸರಕಾರಿ ಜಾಹಿರಾತುಗಳಲ್ಲಿ ಇರುವ ರಾಜಕೀಯ ವ್ಯಕ್ತಿಗಳ ಭಾವಚಿತ್ರ ಮುಚ್ಚಲಾಗಿದೆ ಹಾಗೂ ಬ್ಯಾನರ್ ಗಳನ್ನು ತೆರವುಗೊಳಿಸಲಾಗಿದೆ.
ಈ ಸಂದರ್ಭದಲ್ಲಿ ಎ.ಆರ್.ಓ ಮಂಜುನಾಥ,ಬೈಂದೂರು ತಹಶೀಲ್ದಾರ್ ಪ್ರದೀಪ್ ಆರ್,ಕಂದಾಯ ನಿರೀಕ್ಷಕ ಮಂಜು,ಶಿರೂರು ಗ್ರಾಮ ಲೆಕ್ಕಾಧಿಕಾರಿ ವಿಜಯ್ ಕುಮಾರ್,ಚುನಾವಣಾ ಉಸ್ತುವಾರಿ ಚಂದ್ರಶೇಖರ ಹಾಗೂ ಬೈಂದೂರು ಆರಕ್ಷಕ ಇಲಾಖೆಯ ಸಿಬಂದಿಗಳು ಹಾಜರಿದ್ದರು.
News/pic: Giri shiruru