ಶಿರೂರು: ಅಳ್ವೆಗದ್ದೆ ಕಡಲ ತೀರದಲ್ಲಿ ಶುಕ್ರವಾರ ಮುಂಜಾನೆ ಹೆಚ್ಚುಕಮ್ಮಿ ಪೂರ್ತಿ ಜಿಲ್ಲಾಡಳಿತವೆ ನೆರೆದಿತ್ತು.ಭಾರತ ಚುನಾವಣಾ ಆಯೋಗ,ಉಡುಪಿ ಜಿಲ್ಲಾಡಳಿತ ಹಾಗೂ ಸ್ವೀಪ್ ಸಮಿತಿ ಮುಂದಾಳತ್ವದಲ್ಲಿ ಮತದಾನ ಜಾಗೃತಿ ಅಭಿಯಾನದ ಪ್ರಯುಕ್ತ ಚುನಾವಣಾ ಪರ್ವ ದೇಶದ ಗರ್ವ ಎನ್ನುವ ಪರಿಕಲ್ಪನೆಯಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು.ಆಳ ಸಮುದ್ರದಲ್ಲಿ ಜಿಲ್ಲಾಧಿಕಾರಿಗಳು ಪ್ರತಿಜ್ಞಾ ವಿಧಿ ಬೋಧಿಸಿದರೆ ವಿವಿಧ ಅಧಿಕಾರಿಗಳು ಸ್ಕೂಭಾ ಡ್ರೈವ್ ಮೂಲಕ ವಿಭಿನ್ನವಾಗಿ ಮತದಾನ ಜಾಗೃತಿ ಕಾರ್ಯಕ್ರಮ ನಡೆಸಿಕೊಟ್ಟರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಉಡುಪಿ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ಚುನಾವಣೆ ಎನ್ನುವುದು ಪ್ರಜಾಪ್ರಭುತ್ವದ ಹಬ್ಬವಾಗಿದೆ.ಕಡ್ಡಾಯವಾಗಿ ಪ್ರತಿಯೊಬ್ಬರು ಈ ಹಬ್ಬದಲ್ಲಿ ಭಾಗವಹಿಸಬೇಕು.ಚುನಾವಣೆ ಪ್ರಜಾಪ್ರಭುತ್ವದ ತಳಪಾಯವಾಗಿದೆ. ಈ ಪ್ರಕ್ರಿಯೆ ಪಾರದರ್ಶಕವಾಗಿ ನಡೆಯಬೇಕು.ಚುನಾವಣೆಯಿಂದ ವಿಮುಖರಾಗಬಾರದು.ಮುಖ್ಯವಾಗಿ ಯುವಸಮುದಾಯ ಉತ್ಸಾಹದಿಂದ ತೊಡಗಿಸಿಕೊಳ್ಳಬೇಕಿದೆ. ಮತದಾನದ ಮೂಲಕ ಪ್ರತಿಯೊಬ್ಬರು ನಾಗರೀಕ ಜವಬ್ದಾರಿ ನಿರ್ವಹಿಸಬೇಕಿದೆ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಹಾಗೂ ಸ್ವೀಪ್ ಸಮಿತಿ ಅಧ್ಯಕ್ಷ ಪ್ರತೀಕ್ ಬಾಯಲ್, ಅಪರ ಜಿಲ್ಲಾಧಿಕಾರಿ ಮಮತಾ ಕುಮಾರಿ, ಸಹಾಯಕ ಆಯುಕ್ತೆ ರಶ್ಮಿ ಎಸ್.ಆರ್, ಕರಾವಳಿ ಕಾವಲು ಪಡೆಯ ಎಸ್.ಪಿ.ಮಿಥುನ್, ಸಹಾಯಕ ಚುನಾವಣಾಧಿಕಾರಿ ಮಂಜುನಾಥ್, ಬೈಂದೂರು ತಹಶಿಲ್ದಾರ್ ಪ್ರದೀಪ್, ಡಯಟ್ ಪ್ರಾಂಶುಪಾಲರಾದ ಗೋವಿಂದ ಮಡಿವಾಳ ಉಪಸ್ಥಿತರಿದ್ದರು.
ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಆನಂದ ಎಸ್. ಬಡಕುಂದಿ ಸ್ವಾಗತಿಸಿದರು.ಶಿರೂರು ಗ್ರಾಮ ಪಂಚಾಯತ್ ಪಿಡಿಓ ರಾಜೇಂದ್ರ ವಂದಿಸಿದರು. ತಾಲೂಕು ಪಂಚಾಯತ್ ಸಿಬ್ಬಂದಿ ರೂಪ ಕಾರ್ಯಕ್ರಮ ನಿರ್ವಹಿಸಿದರು.
ಮತದಾನ ಜಾಗೃತಿಗೆ ಸಂಬಂಧಿಸಿದಂತೆ ಶಿರೂರಿನ ಮಹಿಳೆಯರು ಬಂದರು ಪ್ರದೇಶದಲ್ಲಿ ವಿವಿಧ ರಂಗೋಲಿಗಳನ್ನು ಬಿಡಿಸಿದರು.ಜಿಲ್ಲಾಧಿಕಾರಿಗಳು ರಂಗೋಲಿ ಹಾಕುವ ಮೂಲಕ ಚಾಲನೆ ನೀಡಿದರು.ಜಾಥಾ ಕಾರ್ಯಕ್ರಮ ಉಧ್ಘಾಟಿದರು.ಬಳಿಕ ಜಿಲ್ಲಾಧಿಕಾರಿಗಳು ಸೇರಿದಂತೆ ವಿವಿಧ ಇಲಾಖಾ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಶಿರೂರಿನಿಂದ ನಾಯ್ಕನಕಲ್ಲು ಸ್ಕೂಬಾ ಡೈವಿಂಗ್ ಪ್ರದೇಶಕ್ಕೆ ತೆರಳಿ ವಿನೂತನವಾಗಿ ಮತದಾನ ಜಾಗೃತಿ ಅಭಿಯಾನದಲ್ಲಿ ಪಾಲ್ಗೊಂಡರು. ಸಮುದ್ರದ ಮಧ್ಯೆಯೇ ಜಿಲ್ಲಾಧಿಕಾರಿಗಳು ಪ್ರತಿಜ್ಞಾ ವಿಧಿ ಭೋದಿಸಿದರು. ಜಿಲ್ಲಾ ಪಂಚಾಯತ್ ಸಿಇಓ, ಅಪರ ಜಿಲ್ಲಾಧಿಕಾರಿ ಹಾಗೂ ಸಹಾಯಕ ಆಯುಕ್ತರು ಸ್ಕೂಭಾ ಡೈವಿಂಗ್ ಮೂಲಕ ತೆರಳಿ ಮತದಾನ ಜಾಗೃತಿಯ ಬಿತ್ತಿ ಪತ್ರಗಳನ್ನು ಪ್ರದರ್ಶಿಸಿದರು. ಮತದಾನ ಜಾಗೃತಿ ಬೋರ್ಡುಗಳನ್ನು ಪ್ರದರ್ಶಿಸಲಾಯಿತು.
News/Pic: Giri shiruru