ಬೈಂದೂರು: ಭಾರತೀಯ ಜನತಾ ಪಾರ್ಟಿ ಬೈಂದೂರು ಮಂಡಲ,ಬೈಂದೂರು ಪಟ್ಟಣ ಪಂಚಾಯತ್,ಕೊಲ್ಲೂರು ಮಹಾಶಕ್ತಿ ಕೇಂದ್ರ ಹಾಗೂ ಶಿರೂರು ಮಹಾಶಕ್ತಿ ಕೇಂದ್ರ ಇದರ ಕಾರ್ಯಕರ್ತರ ಮತ್ತು ಮತದಾರರ ಸಭೆ ಮಂಗಳವಾರ ಬೈಂದೂರು ಜೆ.ಎನ್.ಆರ್ ಸಭಾಭವನದಲ್ಲಿ ನಡೆಯಿತು.
ಮತದಾರರನ್ನುದ್ದೇಶಿಸಿ ಮಾತನಾಡಿದ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ ರಾಘವೇಂದ್ರ ಈ ಚುನಾವಣೆ ಪ್ರಧಾನಿ ಮೋದಿಯವರಿಗೆ ಮತ್ತೊಮ್ಮೆ ಪಟ್ಟಾಭಿಷೇಕ ಮಾಡುವ ಹಣಾಹಣಿ. ಭಾರತವನ್ನು ವಿಶ್ವ ಗುರುವನ್ನಾಗಿಸುವ ನಿಟ್ಟಿನಲ್ಲಿ ಶ್ರಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿ ಮಾಡುವ ಚುನಾವಣೆ ಇದಾಗಿದೆ. ಅಯೋಧ್ಯೆಯ ಭವ್ಯ ರಾಮಮಂದಿರದಲ್ಲಿ ಶ್ರೀ ರಾಮ ದೇವರ ಪ್ರಾಣ ಪ್ರತಿಷ್ಠೆಯಾಗಿದೆ. ಈ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ಮೋದಿಯವರಿಗೆ ಪಟ್ಟಾಭಿಷೇಕ ಮಾಡಬೇಕು ಭಾರತವನ್ನು ವಿಶ್ವಗುರುವಾಗಿ ಬೆಳಯಲು ಮೇಲ್ಪಂಕ್ತಿ ಹಾಕಿದ ಪ್ರಧಾನಿ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿಯಾಗಿಸುವ ಚುನಾವಣೆಯಾಗಿದೆ ಎಂದರು.ದೇಶ, ಕರ್ನಾಟಕ, ಕ್ಷೇತ್ರದ ರೈತರು, ಬಡವರು, ಮಹಿಳೆಯರು ಸಹಿತ ಎಲ್ಲರೂ ಸ್ವಾಭಿಮಾನದಿಂದ ಬದುಕಬೇಕಾದರೆ ಕೇಂದ್ರದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರಬೇಕು. ಕಾಂಗ್ರೆಸ್ 60 ವರ್ಷಕ್ಕೂ ಹೆಚ್ಚು ಕಾಲ ಈ ದೇಶವನ್ನು ಆಳಿದ್ದರೂ ಬಡವರನ್ನು ಅಭಿವೃದ್ಧಿ ಮಾಡಿಲ್ಲ. ಬಡವರು ಬಡವರಾಗಿಯೇ ಇರುವಂತೆ ನೋಡಿಕೊಂಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು 10 ವರ್ಷಗಳಲ್ಲಿ ಅದೆಷ್ಟೋ ಅಭಿವೃದ್ಧಿ ಕಾರ್ಯ ಮಾಡಿದ್ದಾರೆ. ದೇಶ, ರಾಜ್ಯ, ಕ್ಷೇತ್ರದಲ್ಲಿ ಶಿಕ್ಷಣಕ್ಕೆ ಆದ್ಯತೆ ನೀಡಿದ್ದಾರೆ. ವಿವಿಧ ವಿಶ್ವವಿದ್ಯಾಲಯು, ಕೇಂದ್ರೀಯ ವಿದ್ಯಾಲಯ ಸೇರಿದಂತೆ ಅನೇಕ ಕೊಡುಗೆಯನ್ನು ಶಿವಮೊಗ್ಗ ಕ್ಷೇತ್ರಕ್ಕೂ ನೀಡಿದ್ದಾರೆ ಎಂದರು.
ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭದಲ್ಲಿ ಮೋಹನಪ್ಪ ಭಂಡಾರಿ,ಮುಖಂಡರಾದ ಅಶೋಕ ಮೂರ್ತಿ,ಸದಾನಂದ ಉಪ್ಪಿನಕುದ್ರು,ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಪ್ರಿಯದರ್ಶಿನಿ ದೇವಾಡಿಗ, ಸುರೇಶ ಬಟ್ವಾಡಿ,ಹಿಂದುಳಿದ ಮೋರ್ಚಾದ ಅಧ್ಯಕ್ಷ ಶಿವರಾಜ್ ಪೂಜಾರಿ ಗೋಳಿಹೊಳೆ,ರಮೇಶ ಪೂಜಾರಿ,ಗೋಪಾಲಕೃಷ್ಣ ಕಲ್ಮಕ್ಕಿ,ಗಜೇಂದ್ರ ಬೇಲೆಮನೆ,ಮಹಿಳಾ ಮೋರ್ಚಾದ ಶ್ಯಾಮಲ ಕುಂದರ್,ಉಮೇಶ ಶೆಟ್ಟಿ ಕಲ್ಗದ್ದೆ, ಕೃಷ್ಣ ದೇವಾಡಿಗ ಉಪಸ್ಥಿತರಿದ್ದರು.
ಬೈಂದೂರು ಬಿಜೆಪಿ ಮಂಡಲದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಪ್ರಾಸ್ತಾವಿಕ ಮಾತುಗಳನ್ನಾಡಿದರು.ಬೈಂದೂರು ಬಿಜೆಪಿ ಮಂಡಲದ ಕಾರ್ಯದರ್ಶಿ ಮಹೇಂದ್ರ ಪೂಜಾರಿ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು.ಜಗನ್ನಾಥ ಮೊಗವೀರ ಉಪ್ಪುಂದ ವಂದಿಸಿದರು.
News/Giri shiruru
photo:Deepak shiruru