ಬೈಂದೂರು: ರಾಷ್ಟ್ರಭಕ್ತರ ಬಳಗ ಬೈಂದೂರು ಇದರ ವತಿಯಿಂದ ಬೂತ್ ಮಟ್ಟದ ಕಾರ್ಯಕರ್ತರ ಸಮಾವೇಶ ಕಾರ್ಯಕ್ರಮ ಉಪ್ಪುಂದ ದೇವಕಿ ಬಿ ಆರ್ ಸಭಾಂಗಣದಲ್ಲಿ ನಡೆಯಿತು.
ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್ ಈಶ್ವರಪ್ಪ ಬೂತ್ ಮಟ್ಟದ ಕಾರ್ಯಕರ್ತರ ಸಮಾವೇಶ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಯಡಿಯೂಪ್ಪ ಶಿವಮೊಗ್ಗದಲ್ಲಿ ಮಗನ ಗೆಲುವಿಗಾಗಿ ಕಾಂಗ್ರಸ್ ಜೊತೆಗೆ ಮೈತ್ರಿ ಮಾಡಿಕೊಂಡಿದ್ದಾರೆ. ಅದಕ್ಕಾಗಿಯೇ ಗೀತಾ ಶಿವರಾಜ್ ಕುಮಾರ್ ಅವರನ್ನು ಕಾಂಗ್ರಸ್ನಿಂದ ನಿಲ್ಲಿಸಿ, ಕಾಂಗ್ರೆಸ್ ನಾಯಕರಲ್ಲಿ ಅಸಮಾಧಾನ ಉಂಟು ಮಾಡಿಸಿದ್ದಾರೆ. ಅಸಮಾಧಾನಗೊಂಡ ಕಾಂಗ್ರಸ್ ನಾಯಕರು ಮತ್ತು ಮತದಾರರು ಬೆಂಬಲ ನೀಡುತ್ತಿದ್ದಾರೆ.ಯಡಿಯೂರಪ್ಪ 6 ತಿಂಗಳು ಹಠ ಮಾಡಿ ತನ್ನ ಮಗನಿಗೆ ರಾಜಾಧ್ಯಕ್ಷ ಸ್ಥಾನ ಕೊಡಿಸಿದ್ದಾರೆ, ಪಕ್ಷದಲ್ಲಿನ ಅಪ್ಪ ಮಕ್ಕಳ ಆಟ ನಿಲ್ಲಿಸಿ ಸ್ವಚ್ಚಗೊಳಿಸುವ ಉದ್ದೇಶದಿಂದ ಈ ಚುನಾವಣೆಗೆ ನಿಲ್ಲುತ್ತಿದ್ದು ಪ್ರತಿ ಹಳ್ಳಿಗಳ ಜನರು ನಿಮಗೆ ಅನ್ಯಾಯವಾಗಿದೆ ನಾವು ಜೊತೆಗೆ ಇರುವುದಾಗಿ ಭರವಸೆ ನೀಡುತ್ತಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಹೊಸದುರ್ಗ ಮಾಜಿ ಶಾಸಕ ಗುಳಿಹಟ್ಟಿ ಶೇಖರ್, ತಾಲೂಕು ಪಂಚಾಯತ್ ಮಾಜಿ ಸದಸ್ಯ ನಾರಾಯಣ ಗುಜ್ಜಾಡಿ, ಹಿಂದೂ ಜಾಗರಣ ವೇದಿಕೆ ಅಧ್ಯಕ್ಷ ಯಶವಂತ ಗಂಗೊಳ್ಳಿ, ಉಪ್ಪುಂದ ಗ್ರಾ.ಪಂ ಮಾಜಿ ಸದಸ್ಯ ರಾಜು ದೇವಾಡಿಗ ಕಂಚಿಕಾನ್, ರಾಷ್ಟ್ರಭಕ್ತರ ಬಳಗ ಬೈಂದೂರು ಮುಖಂಡರಾದ ಮಂಜುನಾಥ ರಾವ್ ಬೈಂದೂರು, ಗಣೇಶ್ ರಾವ್ ಬೈಂದೂರು, ರೇಣುಕಾ, ಚಂದ್ರಯ್ಯ ಆಚಾರ್ಯ, ವಿನೋದ್ ಹೆಬ್ಬಾರ್, ವಿಷ್ಣು, ವಿನಯ್ ನಾಯರಿ ನಾವುಂದ ಮೊದಲಾದವರು ಉಪಸ್ಥಿತರಿದ್ದರು.
ಹಿಂದೂ ಮುಖಂಡ ಶ್ರೀಧರ್ ಬಿಜೂರು ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು.ಗೋಪಾಲಕೃಷ್ಣ ನಾಡ ಕಾರ್ಯಕ್ರಮ ನಿರೂಪಿಸಿದರು.ಶ್ರೀಧರ ದೇವಾಡಿಗ ಬಡಾಕೆರೆ ವಂದಿಸಿದರು.